ನಟಿ ರಾಧಿಕಾಗೆ ಸೇರಿದ ಎಸ್ಟೇಟ್‌ನಲ್ಲಿ ಕೆಲಸಕ್ಕಿದ್ದ ಮಹಿಳೆ ನಾಪತ್ತೆ

ಶೇರ್ ಮಾಡಿ

ಚಲನಚಿತ್ರ ನಟಿ ರಾಧಿಕಾ ಅವರ ಮನೆಯಲ್ಲಿ ಕೂಲಿ ಕೆಲಸ ಮಹಿಳೆಯೋರ್ವಳು ಕಾಣೆಯಾಗಿರುವ ಬಗ್ಗೆ ಬಂಟ್ವಾಳ ನಗರ ಪೋಲೀಸ್ ಠಾಣೆಯಲ್ಲಿ ದೂರು‌ ದಾಖಲಾಗಿದೆ.

ಮೂಲತಃ ಉತ್ತರಕನ್ನಡ ಜಿಲ್ಲೆಯ ಕುಮಟಾ ತಾಲೂಕಿನ ಮಾದನಗಿರಿ ನಿವಾಸಿ ಮಹಾದೇವ ಮಾರಿಪಟಗಾರ್ ಅವರ ಪತ್ನಿ ನಾಗರತ್ನ (33) ಕಾಣೆಯಾಗಿರುವ ಮಹಿಳೆ.

ತಾಲೂಕಿನ‌ ಅಮ್ಟೂರು ಗ್ರಾಮದ ರಾಯಪ್ಪನಕೋಡಿ ಎಂಬಲ್ಲಿ ಚಲನಚಿತ್ರ ನಟಿ ರಾಧಿಕಾ ಅವರ ಎಸ್ಟೇಟ್‌ ನಲ್ಲಿ ಕಳೆದ ಆರು ತಿಂಗಳ ಹಿಂದೆ ಕೆಲಸಕ್ಕೆ ಸೇರಿದ ನಾಗರತ್ನ ಇದೀಗ ಕಾಣೆಯಾಗಿರುವುದು.

ನಾಗರತ್ನ ಅವರ ಪತಿ ಮಹಾದೇವ ಮಾರಿಪಟಗಾರ್ ಅವರ ಜೊತೆಯಲ್ಲಿ ಎಸ್ಟೇಟ್ ನಲ್ಲಿ ಕೆಲಸ ಮಾಡುತ್ತಿದ್ದರು.

ಅ.13 ರಂದು ಗಂಡ ಹೆಂಡತಿ ಇಬ್ಬರು ಎಸ್ಟೇಟ್ ನಲ್ಲಿ ಕೆಲಸಕ್ಕೆ ಹೋಗಿದ್ದು, ಆ ದಿನ ಬೆಳಿಗ್ಗೆ 10.30 ರ ವೇಳೆಗೆ ಎಸ್ಟೇಟ್ ನಲ್ಲಿರುವ ಮನೆಗೆ ಚಾ ಕುಡಿಯಲು ಹೋಗಿ ಬರುತ್ತೇನೆ ‌ಎಂದು ಹೋದವಳು ಮತ್ತೆ ಕೆಲಸದ ಕಡೆ ಬಂದಿಲ್ಲ. ಚಹಾ ಕುಡಿಯಲು ಹೋದವಳು ಯಾಕೆ ಬಂದಿಲ್ಲ ಎಂದು ‌ಮನೆ ಕಡೆ ಹೋಗಿ‌ನೋಡಿದಾಗ ಆಕೆ ಮನೆಯಲ್ಲಿರದೆ ಕಾಣೆಯಾಗಿದ್ದಳು.

ಮನೆಯಿಂದ ಬಟ್ಟೆಬರೆ, ಆಧಾರ್‌ ಕಾರ್ಡ್‌, ನಗದು ಸಹಿತ ಕಾಣೆಯಾಗಿದ್ದಾರೆ ಎನ್ನಲಾಗಿದೆ.

ಆಕೆ ಕಳೆದ ಕೆಲವು ಸಮಯಗಳಿಂದ ಪತಿಯ ಜತೆ ಮುನಿಸಿಕೊಂಡಿದ್ದು, ಧರ್ಮಸ್ಥಳ, ಮಂಗಳೂರು ಕಡೆ ಹೋಗಿ ತಿರುಗಾಡಿಕೊಂಡು ಬರುತ್ತಿದ್ದರು. ಹೀಗಾಗಿ ಪತಿ ಕೂಡ ಅದೇ ರೀತಿ ತಿರುಗಾಡಲು ಹೋಗಿದ್ದಾಳೆ ಎಂದು ಭಾವಿಸಿದ್ದರು. ಆದರೆ ಅ.14ರಂದು ಪತಿಗೆ ಕರೆ ಮಾಡಿ ನನ್ನನ್ನು ಹುಡುಕಬೇಡಿ, ನಾನು ದೂರ ಹೋಗುತ್ತೇನೆ ಎಂದು ತಿಳಿಸಿದ್ದಾಳೆ.

ಇದೀಗ ‌ಮೊಬೈಲ್ ನಂ.ಸ್ವಿಚ್ ಆಫ್‌ ಆಗಿದೆ ಎಂದು ಪತಿ ನೀಡಿದ ದೂರಿನಂತೆ ಬಂಟ್ವಾಳ ನಗರ ಪೊಲೀಸ್‌ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

ಈಕೆಯ ಬಗ್ಗೆ ಮಾಹಿತಿ ಸಿಕ್ಕಲ್ಲಿ ಠಾಣೆಯನ್ನು ಸಂಪರ್ಕ ಮಾಡುವಂತೆ ಪೊಲೀಸರು ತಿಳಿಸಿದ್ದಾರೆ.

Leave a Reply

error: Content is protected !!
%d bloggers like this: