ಅಜ್ಜ ಮೊಬೈಲ್ ಕೊಡಿಸದ ಹಿನ್ನೆಲೆಯಲ್ಲಿ ಯುವಕ ಆತ್ಮಹತ್ಯೆಗೆ ಶರಣಾದ ಘಟನೆ ಚಿತ್ರದುರ್ಗದಲ್ಲಿ ನಡೆದಿದೆ.
ಕೊಳಾಳ್ ಗ್ರಾಮದ ಯಶವಂತ್ (20) ಮೃತ ಯುವಕ. ಚಿತ್ರದುರ್ಗ ಜಿಲ್ಲೆ ಹೊಳಲ್ಕೆರೆ ತಾಲೂಕಿನ ಕೊಳಾಳ್ ಗ್ರಾಮದಲ್ಲಿ ಈ ಘಟನೆ ನಡೆದಿದೆ.
ಅಕ್ಟೋಬರ್ 8ರಂದು ಮಹಾಗಣಪತಿ ಶೋಭಾಯಾತ್ರೆ ನಡೆದಿತ್ತು. ಹಿಂದೂ ಮಹಾಗಣಪತಿ ವಿಸರ್ಜನೆ ವೇಳೆ ಯಶವಂತ್ ಮೊಬೈಲ್ ಕಳೆದುಕೊಂಡಿದ್ದನು. ಹೀಗಾಗಿ ಹೊಸ ಮೊಬೈಲ್ ಕೊಡಿಸುವಂತೆ ಅಜ್ಜನ ಬಳಿ ಹಠ ಹಿಡಿದಿದ್ದನು. ಈ ವೇಳೆ ಅಜ್ಜ, ಈರುಳ್ಳಿ ಬೆಳೆ ಬಂದ ಬಳಿಕ ಮೊಬೈಲ್ ಕೊಡಿಸುವುದಾಗಿ ಹೇಳಿದ್ದರು.
ಇದೀಗ ಅಜ್ಜ ಮೊಬೈಲ್ ಕೊಡಿಸಿಲ್ಲವೆಂದು ಯುವಕ ಅಕ್ಟೋಬರ್ 18ರಂದು ಮನೆಯಲ್ಲಿ ರಾಸಾಯನಿಕ ಸೇವಿಸಿ ಆತ್ಮಹತ್ಯೆಗೆ ಯತ್ನಿಸಿದ್ದನು. ವಿಷಯ ತಿಳಿದು ಸಂಬಂಧಿಕರು ಕೂಡಲೇ ಚಿತ್ರದುರ್ಗ ಆಸ್ಪತ್ರೆಗೆ ದಾಖಲಿಸಿದರು.