ಜೋಕಾಲಿಯಾಡ್ತಿದ್ದ ಶಿಕ್ಷಕಿ ಎರಡನೇ ಮಹಡಿಯಿಂದ ಬಿದ್ದು ಸಾವು

ಶೇರ್ ಮಾಡಿ

ಜೋಕಾಲಿ ಆಡುತ್ತಿದ್ದ ಶಿಕ್ಷಕಿಯೊಬ್ಬರು ಎರಡನೇ ಮಹಡಿಯಿಂದ ಆಯತಪ್ಪಿ ಬಿದ್ದು ಸಾವನ್ನಪ್ಪಿದ ಘಟನೆ ಕೊಳ್ಳೇಗಾಲದಲ್ಲಿ ನಡೆದಿದೆ.

ಜಿ.ಪಿ.ಮಲ್ಲಪ್ಪಪುರಂ ಬಡಾವಣೆಯ ಪುಟ್ಟಿ ಮೃತಪಟ್ಟ ಶಿಕ್ಷಕಿಯಾಗಿದ್ದಾರೆ. ಜೋಕಾಲಿಯಿಂದ ಬಿದ್ದು ಗಾಯಗೊಂಡಿದ್ದ ಅವರನ್ನು ಕೊಳ್ಳೇಗಾಲದ ಆಸ್ಪತ್ರೆಗೆ ದಾಖಲಿಸಲಾಗಿತ್ತು. ಬಳಿಕ ಹೆಚ್ಚಿನ ಚಿಕಿತ್ಸೆಗಾಗಿ ಮೈಸೂರಿನ ಆಸ್ಪತ್ರೆಗೆ ರವಾನಿಸಲಾಗಿತ್ತು. ಆದರೆ ಎರಡು ದಿನಗಳ ಕಾಲ ಜೀವನ್ಮರಣದ ನಡುವೆ ಹೋರಾಟ ನಡೆಸಿದ ಅವರು ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಅವರು ಯಳಂದೂರು ತಾಲೂಕಿನ ಮಾಂಬಳ್ಳಿ ಶಾಲೆಯಲ್ಲಿ ಕರ್ತವ್ಯ ನಿರ್ವಹಿಸುತ್ತಿದ್ದರು. ಈ ಸಂಬಂಧ ಕೊಳ್ಳೇಗಾಲ ನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!
%d