ಅಕ್ಕಿ ಸಾಗಾಟದ ಲಾರಿ ಶಿರಾಡಿ ಘಾಟ್ ನಲ್ಲಿ ಬೆಂಕಿಗಾಹುತಿ

ಶೇರ್ ಮಾಡಿ

ನೆಲ್ಯಾಡಿ: ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಬರುತ್ತಿದ್ದ ಅಕ್ಕಿ ಸಾಗಾಟದ ಲಾರಿಯೊಂದು ಬೆಂಕಿಗಾಹುತಿ ಆಗಿರುವ ಘಟನೆ ಅ.20ರಂದು ಮಧ್ಯರಾತ್ರಿ ಸಮಯ ನಡೆದಿದೆ.

ಶಿರಾಡಿ ಘಾಟ್ ನ ಡಬಲ್ ಟರ್ನ್ ನಲ್ಲಿ ಹಾಸನ ಕಡೆಯಿಂದ ಮಂಗಳೂರಿಗೆ ಅಕ್ಕಿ ಸಾಗಾಟ ಮಾಡುತ್ತಿದ್ದ ಲಾರಿಯಲ್ಲಿ ಬೆಂಕಿ ಕಾಣಿಸಿಕೊಂಡಿದೆ.

ಲಾರಿ ಚಾಲಕ ಹಾಗೂ ಕ್ಲೀನರ್ ಗೆ ಅಪಾಯದ ಮುನ್ಸೂಚನೆ ಸಿಗುತ್ತಿದ್ದಂತೆ ಲಾರಿಯನ್ನು ನಿಲ್ಲಿಸಿ ಕೆಳಗಿಳಿದು, ಅಪಾಯದಿಂದ ಪಾರಾಗಿದ್ದಾರೆ.

ಲಾರಿ ಹಾಗೂ ಅದರಲ್ಲಿದ್ದ ಅಕ್ಕಿ ಸಂಪೂರ್ಣ ಸುಟ್ಟು ಹೋಗಿದೆ. ಹಾಸನದಿಂದ ಆಗಮಿಸಿದ ಅಗ್ನಿಶಾಮಕ ದಳದ ಸಿಬ್ಬಂದಿ ಬೆಂಕಿ ನಂದಿಸಿದ್ದಾರೆ.

ಘಟನೆಯಿಂದಾಗಿ ರಾಷ್ಟ್ರೀಯ ಹೆದ್ದಾರಿಯಲ್ಲಿ ಕೆಲ ಹೊತ್ತು ವಾಹನ ಸಂಚಾರಕ್ಕೂ ಅಡಚಣೆ ಉಂಟಾಗಿತ್ತು ಎಂದು ವರದಿಯಾಗಿದೆ.

Leave a Reply

error: Content is protected !!