ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ನಡುವೆ ಮುಖಾಮುಖಿ ಢಿಕ್ಕಿ ಸಂಭವಿಸಿ, ಓರ್ವ ಮೃತಪಟ್ಟ ಘಟನೆ ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ನಡೆದಿದೆ.
ಗಂಭೀರ ಗಾಯಗೊಂಡ ಆಟೋ ಪ್ರಯಾಣಿಕ ಪೆರುವೋಡಿ ನಿವಾಸಿ ನಾಗೇಶ್ ಮೃತಪಟ್ಟವರು ಎಂದು ತಿಳಿದುಬಂದಿದೆ.
ಪೆರುವಾಯಿ-ಬೆರಿಪದವು ರಸ್ತೆಯಲ್ಲಿ ಇನ್ನೊಂದು ವಾಹನವನ್ನು ಓವರ್ ಟೇಕ್ ಮಾಡುವ ಭರದಲ್ಲಿ ದ್ವಿಚಕ್ರ ವಾಹನ ಮತ್ತು ಆಟೋ ರಿಕ್ಷಾ ಮುಖಾಮುಖಿ ಢಿಕ್ಕಿ ಹೊಡೆದಿದೆ ಎಂದು ಪೊಲೀಸರು ತಿಳಿಸಿದ್ದಾರೆ.
ಅಪಘಾತದ ತೀವ್ರತೆಗೆ ಗಂಭೀರ ಗಾಯಗೊಂಡಿದ್ದ ಆಟೋ ಪ್ರಯಾಣಿಕ ನಾಗೇಶ್ ಅವರು ಆಸ್ಪತ್ರೆಗೆ ಸಾಗಿಸುವ ದಾರಿ ಮಧ್ಯೆಯೇ ಮೃತಪಟ್ಟಿದ್ದಾರೆ ಎಂದು ವರದಿಯಾಗಿದೆ.