ಅಂಬುಲೆನ್ಸ್‌ಗೆ ಲಾರಿ ಡಿಕ್ಕಿ- ರೋಗಿ ಸ್ಥಳದಲ್ಲೇ ಸಾವು

ಶೇರ್ ಮಾಡಿ

ಅಂಬುಲೆನ್ಸ್ ಲಾರಿಗೆ ಡಿಕ್ಕಿಯಾದ ಪರಿಣಾಮ ಅದರಲ್ಲಿದ್ದ ರೋಗಿ ಸಾವನ್ನಪ್ಪಿದ ಘಟನೆ ನೆಲಮಂಗಲದ ಬೊಮ್ಮನಹಳ್ಳಿ ಬಳಿ ನಡೆದಿದೆ. ಘಟನೆಯಲ್ಲಿ ಅಂಬುಲೆನ್ಸ್ ಚಾಲಕ ಸೇರಿ ಮೂವರು ಗಾಯಗೊಂಡಿದ್ದಾರೆ.

ಮೃತನನ್ನು ವಿಜಯ್ ಕುಮಾರ್ ಎಂದು ಗುರುತಿಸಲಾಗಿದೆ. ಕ್ಯಾನ್ಸರ್‌ನಿಂದ ಬಳಲುತ್ತಿದ್ದ ಆತನನ್ನು ಚಿಕಿತ್ಸೆಗಾಗಿ ಕರೆತರುವಾಗ ತುಮಕೂರು – ಬೆಂಗಳೂರು ರಾಷ್ಟ್ರೀಯ ಹೆದ್ದಾರಿಯಲ್ಲಿ ವೇಗವಾಗಿ ಬಂದ ಕಂಟೇನರ್ ಲಾರಿಗೆ ಅಂಬುಲೆನ್ಸ್ ಡಿಕ್ಕಿಯಾಗಿದೆ. ಪರಿಣಾಮ ವಿಜಯ್ ಕುಮಾರ್ ತಲೆಗೆ ತೀವ್ರ ಪೆಟ್ಟಾಗಿ ರಕ್ತಸ್ರಾವದಿಂದ ಆಸ್ಪತ್ರೆಗೆ ಕರದೊಯ್ಯುವ ಮಾರ್ಗ ಮಧ್ಯದಲ್ಲೇ ಸಾವನ್ನಪ್ಪಿದ್ದಾರೆ.

ಅಪಘಾತಕ್ಕೆ ಸರಿಯಾದ ಕಾರಣ ತಿಳಿದು ಬಂದಿಲ್ಲ. ಅತಿಯಾದ ವೇಗವೇ ಅಪಘಾತಕ್ಕೆ ಕಾರಣ ಎನ್ನಲಾಗುತ್ತಿದೆ. ಅಪಘಾತದಲ್ಲಿ ಗಾಯಗೊಂಡವರನ್ನು ಆಸ್ಪತ್ರೆಗೆ ದಾಖಲಿಸಲಾಗಿದ್ದು, ಚಿಕಿತ್ಸೆ ನೀಡಲಾಗುತ್ತಿದೆ.

ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ. ಈ ಸಂಬಂಧ ನೆಲಮಂಗಲ ಟ್ರಾಫಿಕ್ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!