200 ಅಡಿ ಆಳದ ಪ್ರಪಾತಕ್ಕೆ ಬಿದ್ದ ಕಾರು; ಚಾಲಕ ಸ್ಥಳದಲ್ಲೇ ಮೃತ್ಯು

ಶೇರ್ ಮಾಡಿ

ಚಾಲಕನ ನಿಯಂತ್ರಣ ತಪ್ಪಿ 200 ಅಡಿ ಪ್ರಪಾತಕ್ಕೆ ಕಾರೊಂದು ಉರುಳಿ ಬಿದ್ದ ಪರಿಣಾಮ ಚಾಲಕ ಸ್ಥಳದಲ್ಲೇ ಮೃತಪಟ್ಟ ಘಟನೆ ಮೂಡಿಗೆರೆ ತಾಲೂಕಿನ ಬಾಳೂರು ಠಾಣ ವ್ಯಾಪ್ತಿಯ ಅಬ್ರುಕೊಡುಗೆ ಬಳಿ ಗುರುವಾರ ಸಂಭವಿಸಿದೆ.

ಅಣಜೂರು ಜಯಮ್ಮನಾಗೇಶರವರ ಪುತ್ರ ರಂಜನ್(38) ಮೃತ ದುರ್ದೈವಿ.

ರಂಜನ್ ಜನ್ನಪುರದಲ್ಲಿ ಹೋಟೆಲ್ ನಡೆಸುತ್ತಿದ್ದ ಎನ್ನಲಾಗಿದ್ದು ಜನ್ನಾಪುರದಿಂದ ಕಳಸ ಕಡೆಗೆ ಹೋಗುವಾಗ ನಿಯಂತ್ರಣ ತಪ್ಪಿ ಅವಘಡ ಸಂಭವಿಸಿದೆ ಎನ್ನಲಾಗಿದೆ.

ಅಬ್ರುಕೊಡುಗೆ ತಿರುವು ಬಳಿ ತಡೆಗೋಡೆ ಇಲ್ಲದೆ ಅವಘಡ ಸಂಭವಿಸಿದೆ ಎಂದು ಸ್ಥಳೀಯರು ಆರೋಪಿಸಿದ್ದಾರೆ.

ಈ ಪ್ರದೇಶದಲ್ಲಿ ತಡೆಗೋಡೆ ನಿರ್ಮಿಸಬೇಕೆಂದು ಹಲವು ಬಾರಿ ಮನವಿ ಸಲ್ಲಿಸಲಾಗಿತ್ತು ಆದರೂ ತಡೆ ಗೋಡೆ ನಿರ್ಮಿಸದೆ ನಿರ್ಲಕ್ಷ ವಹಿಸಲಾಗಿದೆ ಎಂದು ಸ್ಥಳೀಯರು ಆಕ್ರೋಶ ವ್ಯಕ್ತಪಡಿಸಿದ್ದಾರೆ.

ಬಾಳೂರು ಠಾಣೆ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಮೃತದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಮೂಡಿಗೆರೆ ಸರ್ಕಾರಿ ಆಸ್ಪತ್ರೆಗೆ ಸಾಗಿಸಿದ್ದಾರೆ.

Leave a Reply

error: Content is protected !!
%d