ಮಂಗಳೂರಿನಲ್ಲಿ ನೆಲೆಸಿರುವ ಮೂಲತಃ ಶಿಬಾಜೆ ಮೂಲದ ಕಲಪ್ಪುರಯಿಲ್ ಎಂಬಲ್ಲಿನ ಎ.ಸಿ ಜಾರ್ಜ್ ಯಾನೆ ವರ್ಗೀಸ್ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಅ. 29 ರಂದು ನಡೆದಿದೆ.
ತಕ್ಷಣ ಇವರನ್ನು ಆಸ್ಪತ್ರೆಗೆ ಕರೆದೊಯ್ಯಲಾಗಿತ್ತಾದರೂ ದಾರಿ ಮಧ್ಯೆ ಅವರು ಅಸುನೀಗಿದ್ದಾರೆ ಎನ್ನಲಾಗಿದೆ.
ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ. ಧರ್ಮಸ್ಥಳ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು ಪೊಲೀಸರು ತನಿಖೆ ನಡೆಸುತ್ತಿದ್ದಾರೆ.
ಮೃತರಿಗೆ ಓರ್ವ ಪುತ್ರ ಹಾಗೂ ನಾಲ್ವರು ಪುತ್ರಿಯರಿದ್ದು ಐದು ಮಕ್ಕಳು ಕೂಡ ವಿದೇಶದಲ್ಲಿ ನೆಲೆಸಿದ್ದಾರೆ.