ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಕಳ್ಳರ ಬಂಧನ

ಶೇರ್ ಮಾಡಿ

ಮಹಿಳೆಯರ ಮಾಂಗಲ್ಯ ಸರ ಎಗರಿಸಿ ಪರಾರಿಯಾಗಿದ್ದ ಇಬ್ಬರು ಆರೋಪಿಗಳನ್ನು ಪೊಲೀಸರು ಬಂಧಿಸಿದ್ದಾರೆ. ಬಂಧಿತರಿಂದ 9 ಲಕ್ಷಕ್ಕೂ ಅಧಿಕ ಮೌಲ್ಯದ ಚಿನ್ನಾಭರಣಗಳನ್ನು ಪೊಲೀಸರು ವಶಪಡಿಸಿಕೊಂಡಿದ್ದಾರೆ.

ಬಂಧಿತ ಆರೋಪಿಗಳನ್ನು ಹಾವೇರಿ ಮೂಲದ ಆಕಾಶ್ (21), ಪ್ರವೀಣ್ ಹಡಗಲಿ (28) ಎಂದು ಗುರುತಿಸಲಾಗಿದೆ. ಆರೋಪಿಗಳು ಅ.11 ರಂದು ತಮ್ಮ ಬೈಕ್‍ನಲ್ಲಿ ಹಿಂಬದಿಯಿಂದ ಮಹಿಳೆಯ ಬೈಕ್‍ಗೆ ಡಿಕ್ಕಿ ಹೊಡೆಸಿದ್ದರು. ಬಳಿಕ ಬೈಕ್ ನಿಲ್ಲಿಸುತ್ತಿದ್ದಂತೆ ಇಬ್ಬರು ಮಹಿಳೆಯರ ಮಾಂಗಲ್ಯ ಸರ ಕಸಿದುಕೊಂಡು ಪರಾರಿಯಾಗಿದ್ದರು.

ಬಂಧಿತ ಆರೋಪಿಗಳು ವಿನೋಬನಗರ ಪೊಲೀಸ್ ಠಾಣಾ ವ್ಯಾಪ್ತಿಯ 2 ಸರಗಳ್ಳತನ ಪ್ರಕರಣಗಳು, ತುಂಗಾನಗರ ಪೊಲೀಸ್ ಠಾಣೆಯ 1 ಸರಗಳ್ಳತನ ಪ್ರಕರಣ, ತೀರ್ಥಹಳ್ಳಿ ಪೊಲೀಸ್ ಠಾಣೆಯ 1 ಸರಗಳ್ಳತನ ಪ್ರಕರಣ ಮತ್ತು ಉಡುಪಿ ಟೌನ್ ಪೊಲೀಸ್ ಠಾಣೆಯ 2 ದ್ವಿ ಚಕ್ರ ವಾಹನ ಕಳ್ಳತನ ಪ್ರಕರಣ ಸೇರಿ ಒಟ್ಟು 6 ಪ್ರಕರಣಗಳಲ್ಲಿ ಭಾಗಿಯಾಗಿರುವುದು ಬೆಳಕಿಗೆ ಬಂದಿದೆ.

ಬಂಧಿತ ಆರೋಪಿಗಳಿಂದ 9,48,600 ರೂ. ಮೌಲ್ಯದ 186 ಗ್ರಾಂ ಬಂಗಾರದ ಆಭರಣಗಳು ಮತ್ತು 1 ಲಕ್ಷ ರೂ. ಮೌಲ್ಯದ 2 ದ್ವಿಚಕ್ರ ವಾಹನಗಳು ಸೇರಿ ಒಟ್ಟು 10,48,600 ರೂ. ಮೌಲ್ಯದ ವಸ್ತುಗಳನ್ನು ಪೊಲೀಸರು ವಶಕ್ಕೆ ಪಡೆದಿದ್ದಾರೆ. ಈ ಸಂಬಂಧ ವಿನೋಬನಗರ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದ್ದು, ತನಿಖೆ ಮುಂದುವರಿಸಿದ್ದಾರೆ.

Leave a Reply

error: Content is protected !!
%d bloggers like this: