ಆಭರಣ ಜ್ಯುವೆಲ್ಲರ್ಸ್‌ ಮಳಿಗೆಗಳ ಮೇಲೆ ಐಟಿ ದಾಳಿ

ಶೇರ್ ಮಾಡಿ

ಉಡುಪಿ ಹಾಗೂ ಮಂಗಳೂರಿನಲ್ಲಿರುವ ಚಿನ್ನಾಭರಣಗಳ ಮಳಿಗೆ ಆಭರಣ ಜ್ಯುವೆಲ್ಲರ್ಸ್ ಇದರ ವಿವಿಧ ಮಳಿಗೆ, ಮಾಲಕರ ಮನೆಯ ಮೇಲೆ ಇಂದು ಬೆಳಗಿನ ಜಾವ ಆದಾಯ ತೆರಿಗೆ ಅಧಿಕಾರಿಗಳ ತಂಡ ದಾಳಿ ನಡೆಸಿ ಪರಿಶೀಲನೆ ನಡೆಸುತ್ತಿದೆ.

ಉಡುಪಿ ನಗರದಲ್ಲಿರುವ ಪ್ರಮುಖ ಮಳಿಗೆ, ಅಲ್ಲೇ ಸಮೀಪ ಇರುವ ಆಭರಣ ತಯಾರಿಕಾ ಘಟಕ, ಬ್ರಹ್ಮಾವರ, ಮಂಗಳೂರಿನ ಕದ್ರಿ ಬಳಿಯ ಶಿವಭಾಗ್ ನಲ್ಲಿರುವ ಮಳಿಗೆಗಳಿಗೆ ಏಕಕಾಲದಲ್ಲಿ ದಾಳಿ ನಡೆದಿರುವುದು ತಿಳಿದುಬಂದಿದೆ.

ಅದೇ ರೀತಿ ಉಡುಪಿ ನಗರದಲ್ಲಿರುವ ಆಭರಣ ತಯಾರಿಕಾ ಘಟಕದಲ್ಲೂ ಪರಿಶೀಲನೆ ನಡೆಸಲಾಗುತ್ತಿದೆ.ಎಲ್ಲ ಮಳಿಗೆಗಳಿಗೆ ಬೀಗ ಹಾಕಿ ಒಳಗಡೆ ಅಧಿಕಾರಿಗಳು ಪರಿಶೀಲನೆ ನಡೆಸುತ್ತಿರುವುದು ತಿಳಿದುಬಂದಿದೆ. ದಾಳಿಯ ಹಿನ್ನೆಲೆಯಲ್ಲಿ ಪೊಲೀಸ್ ಭದ್ರತೆ ಕೂಡ ಒದಗಿಸಲಾಗಿದೆ.

ಐದಾರು ಜನ ಐಟಿ ಅಧಿಕಾರಿಗಳ ತಂಡದಿಂದ ಜ್ಯುವೆಲ್ಲರಿಯಲ್ಲಿ ಶೋಧ ಕಾರ್ಯ ನಡೆಯುತ್ತಿದ್ದು, ಬಿಲ್ಲಿಂಗ್ ವಿವರ, ಚಿನ್ನದ ಬೇರೆ ಬೇರೆ ದಾಖಲೆ ವಶಕ್ಕೆ ಪಡೆದುಕೊಳ್ಳಲಾಗಿದೆ ಎಂದು ತಿಳಿದು ಬಂದಿದೆ.

ಸುಭಾಷ್ ಕಾಮತ್ ಹಾಗೂ ಮಹೇಶ್ ಕಾಮತ್ ಮಾಲೀಕತ್ವದ ಆಭರಣ ಜ್ಯುವೆಲ್ಲರಿ ಕರ್ನಾಟಕದಲ್ಲಿ 14 ಹಾಗೂ ಗೋವಾದಲ್ಲಿ ಒಂದು ಮಳಿಗೆಗಳನ್ನು ಹೊಂದಿದೆ. ದ.ಕ ಜಿಲ್ಲೆಯ ಬೆಳ್ತಂಗಡಿ, ಮಂಗಳೂರಿನ ಶಿವಭಾಗ್ ಹಾಗೂ ಕೊಟ್ಟಾರದಲ್ಲಿ ಮಳಿಗೆಗಳಿದ್ದು, ಉಡುಪಿಯ ಹಲವಡೆ ಆಭರಣ ಜ್ಯುವೆಲ್ಲರಿ ಮಳಿಗೆಗಳಿವೆ.

Leave a Reply

error: Content is protected !!