ಪುತ್ತೂರು: ತಾಲೂಕು ಮಟ್ಟದ ಕನ್ನಡ ರಾಜ್ಯೋತ್ಸವ ದಿನಾಚರಣೆ ಸಂದರ್ಭದಲ್ಲಿ ತಾಲೂಕಿನ ವಿವಿಧ ಕ್ಷೇತ್ರಗಳಲ್ಲಿ ಸಾಧನೆ ಮಾಡಿದ 10 ಮಂದಿ ಸಾಧಕರನ್ನು ಗುರುತಿಸಿ ಅವರಿಗೆ ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿ ನೀಡಿ ಗೌರವಿಸಲಾಗುವುದು ಎಂದು ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಶಿವಶಂಕರ್ ಅವರು ಪತ್ರಿಕಾ ಪ್ರಕಟಣೆಯಲ್ಲಿ ತಿಳಿಸಿದ್ದಾರೆ.
ಡಾ.ಸುಬ್ರಾಯ ಭಟ್(ವೈದ್ಯಕೀಯ), ಎ.ಪಿ. ನಾರಾಯಣ ಮರಿಕೆ(ಕೃಷಿ), ನಿರ್ಮಲಾ ಸುರತ್ಕಲ್(ಸಾಹಿತ್ಯ), ನಾರಾಯಣ ಕೆ(ಶಿಕ್ಷಣ), ದಯಾನಂದ ರೈ ಕೋರ್ಮಂಡ(ಕ್ರೀಡೆ), ಸುಂದರ ರೈ ಮಂದಾರ(ರಂಗಭೂಮಿ), ರೆ.ವಿಜಯ ಹಾರ್ವಿನ್(ಶಿಕ್ಷಣ-ಸಮನ್ವಯ), ಡಾ. ಅಜಯ್(ಸಮಾಜ ಸೇವೆ), ನಾರಾಯಣ ಕುಂಬ್ರ(ಸಾಹಿತ್ಯ ಸಂಘಟನೆ) ಮತ್ತು ಸಿದ್ದೀಕ್ ನೀರಾಜೆ (ಪತ್ರಿಕೋದ್ಯಮ) ಅವರನ್ನು ತಾಲೂಕು ಮಟ್ಟದ ರಾಜ್ಯೋತ್ಸವ ಪ್ರಶಸ್ತಿಗೆ ಆಯ್ಕೆ ಮಾಡಲಾಗಿದೆ.
ತಾಲೂಕು ರಾಷ್ಟ್ರೀಯ ಹಬ್ಬಗಳ ಆಚರಣಾ ಸಮಿತಿ ಅಧ್ಯಕ್ಷರಾದ ತಹಸೀಲ್ದಾರ್ ಶಿವಶಂಕರ್, ಸಮಿತಿ ಸಂಚಾಲಕರಾದ ಕ್ಷೇತ್ರ ಶಿಕ್ಷಣಾಧಿಕಾರಿ ಲೋಕೇಶ್ ಎಸ್.ಆರ್, ತಾಲೂಕು ಕಸಾಪ ಅಧ್ಯಕ್ಷ ಉಮೇಶ್ ನಾಯಕ್, ಹಿರಿಯ ನ್ಯಾಯವಾದಿ ಬೆಟ್ಟ ಈಶ್ವರ ಭಟ್, ಸಾಹಿತಿ ಹಾಗೂ ಉಪನ್ಯಾಸಕ ಡಾ. ನರೇಂದ್ರ ರೈ ದೇರ್ಲ ಅವರನ್ನು ಒಳಗೊಂಡ ಐವರ ಆಯ್ಕೆ ಸಮಿತಿ 10 ಮಂದಿ ಸಾಧಕರನ್ನು ತಾಲೂಕು ಮಟ್ಟದ ಪ್ರಶಸ್ತಿಗೆ ಆಯ್ಕೆಗೊಳಿಸಿದೆ.