ಮುಂಡಾಜೆ ಪ.ಪೂ.ಕಾಲೇಜು: ಜಾಗೃತ ಜಾಗೃತಿ ಸಪ್ತಾಹ

ಶೇರ್ ಮಾಡಿ

ಕೇಂದ್ರ ಜಾಗೃತ ಆಯೋಗದ ಭ್ರಷ್ಟಾಚಾರ ತಡೆಗಟ್ಟುವಿಕೆ ಮತ್ತು ವಿರುದ್ಧದ ಹೋರಾಟದಲ್ಲಿ ಸಾರ್ವಜನಿಕರಿಗೆ ಜಾಗೃತಿ ಮೂಡಿಸುವ ನಿಟ್ಟಿನಲ್ಲಿ ‘ಜಾಗೃತ ಜಾಗೃತಿ ಸಪ್ತಾಹ’ ವನ್ನು ಅ.30 ರಿಂದ ನ.5 ರವರೆಗೆ “ಭ್ರಷ್ಟಾಚಾರಕ್ಕೆ ಬೇಡವೆನ್ನಿ; ರಾಷ್ಟ್ರಕ್ಕೆ ಬದ್ಧರಾಗಿರಿ” ಎನ್ನುವ ಧ್ಯೇಯ ವಾಕ್ಯದೊಂದಿಗೆ ದೇಶದಾದ್ಯಂತ ಆಚರಿಸಲಾಗುತ್ತಿದೆ.

ಈ ನಿಟ್ಟಿನಲ್ಲಿ ಕಾಲೇಜಿನ ರೋವರ್ಸ್ ರೇಂಜರ್ಸ್ ವಿಭಾಗದ ವಿದ್ಯಾರ್ಥಿಗಳು ಪ್ರತಿಜ್ಞಾ ವಿಧಿ ಸ್ವೀಕರಿಸುವ ಮೂಲಕ ಅರ್ಥಪೂರ್ಣವಾಗಿ ಆಚರಿಸಿದರು.

ಕಾರ್ಯಕ್ರಮದ ಅಧ್ಯಕ್ಷತೆಯನ್ನು ಕಾಲೇಜಿನ ಇತಿಹಾಸ ಉಪನ್ಯಾಸಕಿ ಶ್ರೀಮತಿ ಗೀತಾ ವಹಿಸಿ ‘ಕಾಲೇಜು ವಿದ್ಯಾರ್ಥಿಗಳಲ್ಲಿ ಭ್ರಷ್ಟಾಚಾರದ ದುಷ್ಪರಿಣಾಮಗಳ ಅರಿವು ಮೂಡಿಸುವುದು, ಮಕ್ಕಳು ದೇಶದ ಭವಿಷ್ಯದ ಆಸ್ತಿಗಳು ಮತ್ತು ಅವರಲ್ಲಿ ನೈತಿಕ ಮೌಲ್ಯಗಳನ್ನು ಬೆಳೆಸುವುದು ಮುಖ್ಯ’ ಎಂದರು.

ರೋವರ್ ಸ್ಕೌಟ್ ಲೀಡರ್ ಕೃಷ್ಣ ಕಿರಣ್.ಕೆ ಕಾರ್ಯಕ್ರಮದ ಬಗ್ಗೆ ಮಾಹಿತಿ ನೀಡಿದರು, ರೇಂಜರ್ ಲೀಡರ್ ಶ್ರೀಮತಿ ವಸಂತಿ ಪ್ರತಿಜ್ಞಾ ವಿಧಿ ಬೋಧಿಸಿದರು, ವಿದ್ಯಾರ್ಥಿನಿಯರಾದ ಕುಮಾರಿ ವಿಂಧ್ಯಾ ಸ್ವಾಗತಿಸಿ, ಕುಮಾರಿ ಅಂಜಲಿ ವಂದಿಸಿದರು.

Leave a Reply

error: Content is protected !!