ಟ್ಯಾಂಕರ್ ಢಿಕ್ಕಿ; ಯುವಕ ಸ್ಥಳದಲ್ಲೇ ಮೃತ್ಯು

ಶೇರ್ ಮಾಡಿ

ಟ್ಯಾಂಕರ್ ಢಿಕ್ಕಿ ಹೊಡೆದ ಪರಿಣಾಮ ಯುವಕನೋರ್ವ ಸ್ಥಳದಲ್ಲೇ ಮೃತಪಟ್ಟ ಘಟನೆ ರಾಷ್ಟ್ರೀಯ ಹೆದ್ದಾರಿ 66ರ ಪಡುಬಿದ್ರೆ ಪೇಟೆಯ ಬಸ್ ನಿಲ್ದಾಣದ ಬಳಿ ಶುಕ್ರವಾರ ಸಂಜೆ‌ ನಡೆದಿದೆ.

ಮೃತನನ್ನು ಕಂಚಿನಡ್ಕ ನಿವಾಸಿ ಪ್ರಜ್ವಲ್ ಎಂದು ಗುರುತಿಸಲಾಗಿದೆ.

ಮಂಗಳೂರು ಕಡೆಗೆ ತೆರಳುವ ಬಸ್ ನಿಲ್ದಾಣದಲ್ಲಿ ಖಾಸಗಿ ಬಸ್ಸೊಂದು ಪ್ರಯಾಣಿಕರನ್ನು ಇಳಿಸಲು ನಿಲ್ಲಿಸಿದ ವೇಳೆ ಹಿಂದಿನಿಂದ ಬಂದ ಬೈಕ್ ಢಿಕ್ಕಿ ಹೊಡೆದ ಪರಿಣಾಮ ಪ್ರಜ್ವಲ್‌ ರಸ್ತೆಗೆ ಎಸೆಯಲ್ಪಟ್ಟಿದ್ದರು. ಈ ವೇಳೆ ಟ್ಯಾಂಕರ್ ಅವರ ಮೇಲೆ ಹರಿದ ಪರಿಣಾಮ ಪ್ರಜ್ವಲ್ ಸ್ಥಳದಲ್ಲೇ ಮೃತಪಟ್ಟರು ಎಂದು ಸ್ಥಳೀಯರು ತಿಳಿಸಿದ್ದಾರೆ.

ಪಡುಬಿದ್ರೆ ಪೊಲೀಸರು ಸ್ಥಳಕ್ಕೆ ಧಾವಿಸಿ ಸ್ಥಳ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!