ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ದೇವಾಲಯದೊಳಗೆ ಮೂತ್ರ ಮೂತ್ರ ವಿಸರ್ಜಿಸಿರುವ ಘಟನೆಗೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗಿದ್ದು, ವಿಡಿಯೋ ಸೋಶಿಯಲ್ ಮೀಡಿಯಾದಲ್ಲಿ ವೈರಲ್ ಆಗಿದೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್‌ನಲ್ಲಿ ಈ ಘಟನೆ ನಡೆದಿದೆ ಎನ್ನಲಾಗಿದೆ. ಮುಸ್ಲಿಂ ವ್ಯಕ್ತಿಯೊಬ್ಬ ಹಿಂದೂ ದೇವಾಲಯಕ್ಕೆ ನುಗ್ಗಿ ಶಿವಲಿಂಗದ ಬಳಿ ಮೂತ್ರ ವಿಸರ್ಜನೆ ಮಾಡಿದ್ದಾನೆ.
ಪಶ್ಚಿಮ ಬಂಗಾಳದ ಮುರ್ಷಿದಾಬಾದ್ ಜಿಲ್ಲೆಯ ಸಲಾರ್ ಬ್ಲಾಕ್ ವ್ಯಾಪ್ತಿಯ ಕಂದರ್ ಗ್ರಾಮದಲ್ಲಿ ಈ ಘಟನೆ ನಡೆದಿದೆ ಎಂದು ವರದಿಯಾಗಿದೆ.
ಕೃತ್ಯವೆಸಗಿದ ವ್ಯಕ್ತಿಯನ್ನು ಅರಾ ಶೇಖ್ ಎಂದು ಗುರುತಿಸಲಾಗಿದ್ದು, ಘಟನೆಯ ವಿಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆಗಿದ್ದು, ಆರೋಪಿಯನ್ನು ಬಂಧಿಸಲಾಗಿದೆ ಎನ್ನಲಾಗಿದೆ.
ಆರೋಪಿ ಅರಾ ಶೇಕ್ ಮತ್ತೊಬ್ಬ ವ್ಯಕ್ತಿಯೊಂದಿಗೆ ವಾಗ್ವಾದಕ್ಕಿಳಿದಿದ್ದಾನೆ. ಇದೇ ಸಿಟ್ಟಿನಲ್ಲಿ ಆತ ದೇವಾಲಯದ ಒಳಗೆ ಪ್ರವೇಶ ಮಾಡಿ ಮೂತ್ರ ವಿಸರ್ಜನೆ ಮಾಡಿದ್ದಾನೆ. ಈ ವೇಳೆ ಆತನನ್ನು ತಡೆಯುವ ಪ್ರಯತ್ನ ಮಾಡಿದ್ದರೂ ಆತ ಮಾತು ಕೇಳದೆ ಈ ಕೃತ್ಯವನ್ನುವೆಸಗಿದ್ದಾನೆ.
ಈ ಘಟನೆ ಯಾವಾಗ ನಡೆದಿದೆ ಎನ್ನುವುದರ ಬಗ್ಗೆ ಖಚಿತವಾದ ಮಾಹಿತಿಗಳಿಲ್ಲ. ಘಟನೆಯ ವೀಡಿಯೋ ಸಾಮಾಜಿಕ ಜಾಲತಾಣಗಳಲ್ಲಿ ವೈರಲ್ ಆದ ನಂತರ ಆರೋಪಿಯನ್ನು ಬಂಧಿಸಲಾಗಿದೆ ಎಂದು ವರದಿಯಾಗಿದೆ. ಆದರೆ ಇದು ಇನ್ನೂ ದೃಢಪಟ್ಟಿಲ್ಲ.
ಘಟನೆಗೆ ಸಂಬಂಧಿಸಿದಂತೆ ಸಾಮಾಜಿಕ ಜಾಲತಾಣದಲ್ಲಿ ಭಾರೀ ಆಕ್ರೋಶ ವ್ಯಕ್ತವಾಗುತ್ತಿದೆ.