
ನೆಲ್ಯಾಡಿ: ಶಾಲೆಯ ಕಟ್ಟಡ ಸಂಪೂರ್ಣ ಶಿಥಿಲಗೊಂಡು ಬೀಳುವ ಹಂತದಲ್ಲಿದ್ದು, ನ.3ರಂದು ಸಂಜೆ ವಿಪರೀತ ಗಾಳಿ ಮಳೆಯಿಂದಾಗಿ ಹಂಚುಗಳು ಹಾರಿ ಹೋಗಿವೆ. ಇದರಿಂದಾಗಿ ಇನ್ನಷ್ಟು ಕಟ್ಟಡವು ಹಾನಿಗೊಳಗಾಗಲಿದೆ.
ಕಟ್ಟಡವು ಸಂಪೂರ್ಣ ಶಿಥಿಲಗೊಂಡಿದ್ದು ಬೀಳುವ ಹಂತದಲ್ಲಿರುವ ಬಗ್ಗೆ ಸಂಬಂಧಪಟ್ಟ ಇಲಾಖೆಗೆ ಹಲವು ಬಾರಿ ಮನವಿ ಮಾಡಿದರು ಯಾವುದೇ ರೀತಿಯ ಪ್ರಯೋಜನವಾಗಲಿಲ್ಲವೆಂದು ಶಾಲಾ ಅಭಿವೃದ್ಧಿ ಸಮಿತಿಯ ಅಧ್ಯಕ್ಷರಾದ ಮಹಮ್ಮದ್ ರಫೀಕ್ ಮಾಧ್ಯಮಕ್ಕೆ ತಿಳಿಸಿದರು.

