8ನೇ ಮಹಡಿಯಿಂದ ಜಿಗಿದು ಬಾಲಕಿ ಆತ್ಮಹತ್ಯೆ

ಶೇರ್ ಮಾಡಿ

ಮಾನಸಿಕ ಖಿನ್ನತೆಯಿಂದ ಬಳಲುತ್ತಿದ್ದ ಬಾಲಕಿ ಫ್ಲ್ಯಾಟ್‌ನಿಂದ ಆತ್ಮಹತ್ಯೆ ಮಾಡಿಕೊಂಡ ದುರ್ಘಟನೆ ಉಡುಪಿ ಜಿಲ್ಲೆಯ ಹೆರ್ಗ ಸಮೀಪದ ಹೈ‌ಪಾಯಿಂಟ್ ಹೈಟ್ಸ್ ಹೆಸರಿನ ಫ್ಲ್ಯಾಟ್ ನಲ್ಲಿ ನಡೆದಿದೆ.

ಪ್ರಜ್ಞಾ(13) ಆತ್ಮಹತ್ಯೆ ಮಾಡಿಕೊಂಡ ದುರ್ದೈವಿ ಬಾಲಕಿ. ಮಣಿಪಾಲದ ಖಾಸಗಿ ಶಾಲೆಯಲ್ಲಿ 8ನೇ ತರಗತಿ ಓದುತ್ತಿದ್ದ ಪ್ರಜ್ಞಾ. ಬಾಲಕಿ ಇತ್ತೀಚಿನ ಕೆಲ ತಿಂಗಳಿಂದ ಮಾನಸಿಕ ಖಿನ್ನತೆಗೆ ಒಳಗಾಗಿದ್ದಳು ಎಂದು ಹೇಳಲಾಗಿದೆ.

ಇಂದು ಮುಂಜಾನೆ 6.30 ವೇಳೆಗೆ ಹೈ‌ಪಾಯಿಂಟ್ ಹೈಟ್ಸ್ ಫ್ಲ್ಯಾಟ್ ಮಹಡಿಯಿಂದ ಜಿಗಿದು ಆತ್ಮಹತ್ಯೆ ಮಾಡಿಕೊಂಡಿರುವ ಬಾಲಕಿ. ಎಂಟನೆ ಮಹಡಿಯಿಂದ ನೆಲಕ್ಕೆ ಅಪ್ಪಳಿಸಿ ತೀವ್ರವಾಗಿ ಗಾಯಗೊಂಡಿದ್ದ ಬಾಲಕಿ. ಪೋಷಕರು ತಕ್ಷಣ ಮಣಿಪಾಲದ ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಆದರೆ ಚಿಕಿತ್ಸೆ ಫಲಕಾರಿಯಾಗದೆ ಕೊನೆಯುಸಿರೆಳೆದ ಬಾಲಕಿ.

Leave a Reply

error: Content is protected !!