ಕಡಬ: ಆನೆ ತುಳಿತಕ್ಕೊಳಗಾಗಿದ್ದ ವ್ಯಕ್ತಿ ಸಾವು

ಶೇರ್ ಮಾಡಿ

ಕಡಬ: ಆನೆ ತುಳಿತಕ್ಕೊಳಗಾಗಿ ಚಿಂತಾಜನಕ ಸ್ಥಿತಿಯಲ್ಲಿ ಒಂದು ತಿಂಗಳಿಂದ ಚಿಕಿತ್ಸೆ ಪಡೆಯುತ್ತಿದ್ದ ಗೇರ್ತಿಲ ನಿವಾಸಿ ಚೋಮ ಅವರು ಇಂದು ಮೃತಪಟ್ಟಿದ್ದಾರೆ.

ಸೆ.28 ರಂದು ಕೆಲಸ ಮುಗಿಸಿ ಮನೆಗೆ ಹಿಂದಿರುಗುತ್ತಿದ್ದಾಗ ಮರ್ದಾಳದಿಂದ ಮನೆ ಕಡೆಗೆ ನಡೆದುಕೊಂಡು ಹೋಗುತ್ತಿದ್ದ ವೇಳೆ ಐತ್ತೂರು ಕೊಣಾಜೆ ರಸ್ತೆಯಲ್ಲಿ ಕಾಡಾನೆ ದಾಳಿ ನಡೆಸಿ ಗಂಭೀರ ಗಾಯಗೊಂಡಿದ್ದರು.

ಬಳಿಕ ಅವರು ಆಸ್ಪತ್ರೆಯಲ್ಲಿ ಚಿಕಿತ್ಸೆ ಪಡೆದು ಕೆಲ ದಿನಗಳ ಹಿಂದೆ ಅವರನ್ನು ಮನೆಗೆ ತರಲಾಗಿತ್ತು. ಚೋಮ ಅವರು ಇಂದು ಬೆಳಗ್ಗಿನ ಜಾವ ಮೃತಪಟ್ಟಿದ್ದಾರೆ.

Leave a Reply

error: Content is protected !!