ವಿಷ ಸೇವಿಸಿ ಎಎಸ್ಐ ಆತ್ಮಹತ್ಯೆ

ಶೇರ್ ಮಾಡಿ

ವಿಷ ಸೇವಿಸಿ ಎಎಸ್‌ಐ ಆತ್ಮಹತ್ಯೆ ಮಾಡಿಕೊಂಡಿರುವ ಘಟನೆ ಧಾರವಾಡ ಜಿಲ್ಲೆಯ ಕುಂದಗೋಳ ತಾಲ್ಲೂಕಿನ ಗುಡಿಗೇರಿಯಲ್ಲಿ ಘಟನೆ ನಡೆದಿದೆ.

ಗುಡಿಗೇರಿ ಪೊಲೀಸ್ ಠಾಣೆಯ ಎಎಸ್‌ಐ ಬಸವರಾಜ ಶಾಂತವೀರಪ್ಪ ಪಾಯಣ್ಣವರ (54) ಆತ್ಮಹತ್ಯೆ ಮಾಡಿಕೊಂಡವರು. ರಾತ್ರಿ ಪಾಳಿ ಕೆಲಸ ಮುಗಿಸಿ ವಸತಿ ಗೃಹಕ್ಕೆ ಹೋಗಿದ್ದರು. ವಸತಿ ಗೃಹದ ಆವರಣದಲ್ಲಿ ದೇಗುಲದ ಬಳಿ ಮಲಗಿದ್ದರು.

ಕುಟುಂಬಸ್ಥರು ಊಟಕ್ಕೆ ಎಬ್ಬಿಸಲು ಹೋದಾಗ ಎದ್ದೇಳಲಿಲ್ಲ. ಆಗ ಆತ್ಮಹತ್ಯೆ ವಿಷಯ ಬೆಳಕಿಗೆ ಬಂದಿದೆ. ವಿಷ ಸೇವಿಸಿ ಆತ್ಮಹತ್ಯೆ ಮಾಡಿಕೊಂಡಿರುವುದು ಮರಣೋತ್ತರ ಪರೀಕ್ಷೆಯಲ್ಲಿ ಬಹಿರಂಗವಾಗಿದೆ. ಆತ್ಮಹತ್ಯೆಗೆ ನಿಖರ ಕಾರಣ ತಿಳಿದು ಬಂದಿಲ್ಲ.

ಮೃತ ಎಎಸ್‌ಐ ಕೆಲವು ದಿನಗಳಿಂದ ಕಾಲುನೋವಿನಿಂದ ಬಳಲುತ್ತಿದ್ದರು. ಅದೇ ಆತ್ಮಹತ್ಯೆಗೆ ಕಾರಣವಿರಬಹುದೆಂದು ಶಂಕಿಸಲಾಗಿದೆ. ಮೃತ ಬಸವರಾಜ ಮೂಲತಃ ಗದಗ ಜಿಲ್ಲೆಯ ಗಜೇಂದ್ರಗಢ ಸಮೀಪದ ಶಾಂತಗಿರಿ ಗ್ರಾಮದವರು.

ಬಸವರಾಜ ಅವರಿಗೆ ಪತ್ನಿ ಮತ್ತು ಮೂವರು ಮಕ್ಕಳು ಇದ್ದರು. ಗುಡುಗೇರಿ ಪೊಲೀಸ್ ಠಾಣೆಯಲ್ಲಿ ಈ ಸಂಬಂಧ ಪ್ರಕರಣ ದಾಖಲಾಗಿದೆ.

Leave a Reply

error: Content is protected !!