ಕೊಕ್ಕಡ ಪ್ರಾ.ಕೃ.ಪ.ಸ. ಸಂಘದ ವತಿಯಿಂದ ಕೊಕ್ಕಡ ಸರಕಾರಿ ಆಸ್ಪತ್ರೆಗೆ ಕುಡಿಯುವ ನೀರಿನ ಫಿಲ್ಟರ್ ಕೊಡುಗೆ

ಶೇರ್ ಮಾಡಿ

ನೇಸರ ಫೆ.02: ಸ್ವಾತಂತ್ರ್ಯೋತ್ಸವದ ಅಮೃತ ಮಹೋತ್ಸವದ ಸವಿನೆನಪಿಗಾಗಿ ಕೊಕ್ಕಡ ಪ್ರಾಥಮಿಕ ಕೃಷಿ ಪತ್ತಿನ ಸಹಕಾರಿ ಸಂಘದಿಂದ ಕುಡಿಯುವ ನೀರಿನ ಫಿಲ್ಟರ್‌ನ್ನು ಬೆಳ್ತಂಗಡಿಯ ಶಾಸಕ ಹರೀಶ್ ಪೂಂಜಾ ಫೆ.2 ರಂದು ಕೊಕ್ಕಡ ಸರಕಾರಿ ಆಸ್ಪತ್ರೆಗೆ ಹಸ್ತಾಂತರಿಸಿದರು.

ಈ ಸಂದರ್ಭದಲ್ಲಿ ಸಂಘದ ಅಧ್ಯಕ್ಷ ಕುಶಾಲಪ್ಪ ಗೌಡ, ಗ್ರಾಮ ಪಂಚಾಯತ್ ಅಧ್ಯಕ್ಷ ಯೋಗೀಶ್ ಆಲಂಬಿಲ, ಉಪಾಧ್ಯಕ್ಷೆ ಪವಿತ್ರಾ, ಪಂ.ಅಭಿವೃದ್ಧಿ ಅಧಿಕಾರಿ ದೀಪಕ್ ರಾಜ್, ಪ್ರಾಥಮಿಕ ಆರೋಗ್ಯ ಕೇಂದ್ರದ ವೈದ್ಯಾಧಿಕಾರಿ ಡಾ| ಪ್ರಕಾಶ್, ಸಹಕಾರಿ ಸಂಘದ ನಿರ್ದೇಶಕರು, ಪಂಚಾಯತ್ ಸದಸ್ಯರು, ಆರೋಗ್ಯ ಕೇಂದ್ರದ ಸಿಬ್ಬಂದಿ ವರ್ಗ, ಸಹಕಾರಿ ಸಂಘದ ಮುಖ್ಯ ಕಾರ್ಯನಿರ್ವಹಣಾಧಿಕಾರಿ ನವೀನ್ ಕೆ, ಪಂಚಾಯತ್ ನ ಸದಸ್ಯರುಗಳು, ಆಸ್ಪತ್ರೆಯ ಸಿಬ್ಬಂದಿಗಳು ಉಪಸ್ಥಿತರಿದ್ದರು.

Leave a Reply

error: Content is protected !!