ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣ: ನಾಲ್ವರು ಆರೋಪಿಗಳಿಗೆ ನ.22ರ ತನಕ ನ್ಯಾಯಾಂಗ ಕಸ್ಟಡಿ

ಶೇರ್ ಮಾಡಿ

ಅಕ್ಷಯ್ ಕಲ್ಲೇಗ ಕೊಲೆ ಪ್ರಕರಣಕ್ಕೆ ಸಂಬಂಧಿಸಿ ಆರೋಪಿಗಳಾದ ಚೇತನ್, ಮನೀಶ್, ಕೇಶವ, ಮಂಜುನಾಥ್ ಎಂಬವರನ್ನು ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸಲಾಯಿತು.

ಮಂಗಳವಾರ ರಾತ್ರಿ ಆರೋಪಿಗಳನ್ನು ನ್ಯಾಯಾಧೀಶರ ಮನೆಗೆ ಹಾಜರುಪಡಿಸಲಾಗಿತ್ತು. ಬುಧವಾರ ನ್ಯಾಯಾಲಯಕ್ಕೆ ಹಾಜರುಪಡಿಸ ಲಾಯಿತು. ನ್ಯಾಯಾಧೀಶರು ನ.22ರ ತನಕ ನ್ಯಾಯಾಂಗ ಕಸ್ಟಡಿಗೊಳಪಡಿಸಿ ಆದೇಶ ನೀಡಿದ್ದಾರೆ.

ಸೋಮವಾರ ತಡರಾತ್ರಿ ಅಕ್ಷಯ್ ಕಲ್ಲೇಗ ಅವರನ್ನು ನಾಲ್ವರ ತಂಡ ತಲವಾರಿನಿಂದ ಹತ್ಯೆ ಮಾಡಿತ್ತು. ಅದಾದ ಬಳಿಕ ಇಬ್ಬರು ಆರೋಪಿಗಳು ಪೊಲೀಸರಿಗೆ ಶರಣಾಗಿದ್ದರು. ಇನ್ನಿಬ್ಬರು ಆರೋಪಿಗಳನ್ನು ಪೊಲೀಸರು ಕಾರ್ಯಾಚರಣೆ ನಡೆಸಿ ವಶಕ್ಕೆ ಪಡೆದುಕೊಂಡಿದ್ದರು.

Leave a Reply

error: Content is protected !!