ಕಾರ್ಕಳ ತಾಲೂಕು ನಂದಳಿಕೆ ಗ್ರಾಮದ ಮಾವಿನಕಟ್ಟೆ ನಿವಾಸಿ ದೀಪಾ(21) ಎಂಬ ಯುವತಿಯು ನವೆಂಬರ್ 6ರಂದು ಮನೆಯಿಂದ ಹೊರಗೆ ಹೋದವರು ವಾಪಾಸು ಬಾರದೇ ನಾಪತ್ತೆಯಾಗಿದ್ದಾರೆ.
5 ಅಡಿ 2 ಇಂಚು ಎತ್ತರ, ಗೋಧಿ ಮೈಬಣ್ಣ, ಕೋಲು ಮುಖ, ಸಪೂರ ಶರೀರ ಹೊಂದಿದ್ದು, ಕನ್ನಡ ಹಾಗೂ ತುಳು ಭಾಷೆ ಮಾತನಾಡುತ್ತಾರೆ.
ಇವರ ಬಗ್ಗೆ ಮಾಹಿತಿ ದೊರೆತಲ್ಲಿ ಕಾರ್ಕಳ ಗ್ರಾಮಾಂತರ ಪೊಲೀಸ್ ಠಾಣೆಯ ಉಪನಿರೀಕ್ಷಕರನ್ನು ಸಂಪರ್ಕಿಸಬಹುದು ಎಂದು ಪ್ರಕಟಣೆ ತಿಳಿಸಿದೆ.