ಅರುಣ್ ಪುತ್ತಿಲ ಕಚೇರಿ ಎದುರು ತಲವಾರು ಪ್ರದರ್ಶನ!; ತಲವಾರು ಹಿಡಿದ ದಿನೇಶ್ ಪಂಜಿಗ ಸಹಿತ ಐವರು ಪೊಲೀಸರ ವಶಕ್ಕೆ

ಶೇರ್ ಮಾಡಿ

ಹಿಂದೂ ಸಂಘಟನೆಗಳ ಮುಖಂಡ ಅರುಣ್ ಕುಮಾರ್ ಪುತ್ತಿಲರವರು ಮುಕ್ರಂಪಾಡಿಯಲ್ಲಿ ಹೊಂದಿರುವ ಪುತ್ತಿಲ ಪರಿವಾರದ ಕಚೇರಿಯ ಮುಂಭಾಗದಲ್ಲಿ ಯುವಕನೋರ್ವ ನಾಲ್ವರು ಸಹಚರರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿ ಬೊಬ್ಬೆ ಹೊಡೆಯುತ್ತಿದ್ದ ಘಟನೆ ನಡೆಯುತ್ತಿದ್ದಂತೆಯೇ ಪುತ್ತೂರು ನಗರ ಠಾಣಾ ಪೊಲೀಸರು ಆಗಮಿಸಿದ್ದಾರೆ.

ಅರುಣ್ ಪುತ್ತಿಲ ಬೆಂಬಲಿಗರಾದ ಮನೀಶ್ ಕುಲಾಲ್ ಬನ್ನೂರು ಅವರನ್ನು ಗುರಿಯಾಗಿಟ್ಟುಗೊಂಡು ದಿನೇಶ್ ಪಂಜಿಗ ಎಂಬಾತ ನಾಲ್ವರು ಯುವಕರೊಂದಿಗೆ ತಲವಾರು ಹಿಡಿದುಕೊಂಡು ಆಗಮಿಸಿದ್ದ.

ಪುತ್ತಿಲ ಕಚೇರಿಯಲ್ಲಿ ಕೃಷ್ಣಪ್ರಸಾದ್ ಶೆಟ್ಟಿ ಮತ್ತಿತರರು ಇದ್ದರು. ಮನೀಶ್ ಕುಲಾಲ್ ಕಚೇರಿಯಲ್ಲಿ ಇರಲಿಲ್ಲ. ಮಾಹಿತಿ ತಿಳಿದ ಮನೀಶ್ ಕುಲಾಲ್ ಪೊಲೀಸರಿಗೆ ಮಾಹಿತಿ ನೀಡಿದ್ದರು.

ತಕ್ಷಣ ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ ಯುವಕರನ್ನು ವಶಕ್ಕೆ ಪಡೆದುಕೊಂಡಿದ್ದಾರೆ. ವಾಟ್ಸಾಪ್ ಗ್ರೂಪ್‌ನಲ್ಲಿ ನಡೆದ ಚರ್ಚೆಯ ಕೋಪದಲ್ಲಿ ಈ ಕೃತ್ಯ ನಡೆದಿದೆ. ಹಾಡಹಗಲೇ ತಲವಾರು ಹಿಡಿದುಕೊಂಡು ಪರಿಸ್ಥಿತಿಯಲ್ಲಿ ಉಂಟಾಗಿರುವುದು ಜನರ ಆತಂಕ ಮತ್ತು ಆಕ್ರೋಶಕ್ಕೆ ಕಾರಣವಾಗಿದೆ.

Leave a Reply

error: Content is protected !!