4 ವರ್ಷದ ಮಗುವಿನ ಮೇಲೆ ಅತ್ಯಾಚಾರವೆಸಗಿದ ಸಬ್ ಇನ್ಸ್‌ಪೆಕ್ಟರ್

ಶೇರ್ ಮಾಡಿ

ನಾಲ್ಕು ವರ್ಷದ ಮಗುವಿನ ಮೇಲೆ ಪೊಲೀಸ್ ಸಬ್ ಇನ್ಸ್‌ಪೆಕ್ಟರ್ ಅತ್ಯಾಚಾರವೆಸಗಿರುವ ಅಮಾನುಷ ಘಟನೆ ರಾಜಸ್ಥಾನದ ದೌಸಾ ಜಿಲ್ಲೆಯಲ್ಲಿ ಶುಕ್ರವಾರ ನಡೆದಿದೆ.

ವರದಿಗಳ ಪ್ರಕಾರ, ಜಿಲ್ಲೆಯ ಲಾಲ್ಸೋಟ್ ಪ್ರದೇಶದಿಂದ ಘಟನೆ ನಡೆದಿರುವುದಾಗಿ ವರದಿಯಾಗಿದ್ದು, ಭೂಪೇಂದ್ರ ಸಿಂಗ್ ಎಂದು ಗುರುತಿಸಲಾದ ಆರೋಪಿ ಸಬ್ ಇನ್ಸ್‌ಪೆಕ್ಟರ್ ಮಧ್ಯಾಹ್ನ ನಾಲ್ಕು ವರ್ಷದ ಮಗುವನ್ನು ತನ್ನ ಕೋಣೆಗೆ ಕರೆದೊಯ್ದು ಅತ್ಯಾಚಾರವೆಸಗಿದ್ದಾನೆ ಎಂದು ಎಎಸ್ಪಿ ರಾಮಚಂದ್ರ ಸಿಂಗ್ ನೆಹ್ರಾ ಸುದ್ದಿ ಸಂಸ್ಥೆಗೆ ಮಾಹಿತಿ ನೀಡಿದ್ದಾರೆ.

ಘಟನೆಗೆ ಸಂಬಂಧಿಸಿ ಭೂಪೇಂದ್ರ ಸಿಂಗ್ ನನ್ನ ವಶಕ್ಕೆ ಪಡೆದು ತನಿಖೆ ನಡೆಸಲಾಗುತ್ತಿದೆ ಎಂದು ಹೇಳಿದ್ದಾರೆ.

ಪೊಲೀಸ್ ಅಧಿಕಾರಿ ನಡೆಸಿದ ಕೃತ್ಯದ ವಿರುದ್ಧ ಸ್ಥಳೀಯ ನಿವಾಸಿಗಳು ಹೆಚ್ಚಿನ ಸಂಖ್ಯೆಯಲ್ಲಿ ರಾಹುವಾಸ್ ಪೊಲೀಸ್ ಠಾಣೆ ಎದುರು ಜಮಾಯಿಸಿ ಆರೋಪಿಗೆ ಕಠಿಣ ಶಿಕ್ಷೆ ನೀಡುವಂತೆ ಆಗ್ರಹಿಸಿದರು ಅಲ್ಲದೆ ಅತ್ಯಾಚಾರ ನಡೆಸಿರುವ ವಿಚಾರ ಬೆಳಕಿಗೆ ಬರುವಂತೆ ಊರಿನ ಜನ ಪೊಲೀಸ್ ಸಬ್ ಇನ್ಸ್‌ಪೆಕ್ಟರ್‌ಗೆ ಮನ ಬಂದಂತೆ ಥಳಿಸಿ ಬಳಿಕ ಪೊಲೀಸರ ವಶಕ್ಕೆ ನೀಡಿದ್ದಾರೆ. ಅಲ್ಲದೆ ಪೊಲೀಸರ ವಿರುದ್ಧ ಘೋಷಣೆಗಳನ್ನು ಕೂಗಿದ್ದಾರೆ, ಯಾವುದೇ ಕಾರಣಕ್ಕೂ ಆರೋಪಿಯನ್ನು ಬಿಡುಗಡೆ ಮಾಡದಂತೆ ಒತ್ತಾಯಿಸಿ ಪ್ರತಿಭಟನೆ ನಡೆಸಿದರು.

ಭಾರತೀಯ ಜನತಾ ಪಕ್ಷದ ಸಂಸದ ಕಿರೋಡಿ ಲಾಲ್ ಮೀನಾ ಕೂಡ ಸ್ಥಳಕ್ಕಾಗಮಿಸಿ ತಪ್ಪಿತಸ್ಥ ಅಧಿಕಾರಿಯ ವಿರುದ್ಧ ಕಠಿಣ ಕ್ರಮ ಕೈಗೊಳ್ಳುವಂತೆ ಆಗ್ರಹಿಸಿದರು. ಅಮಾಯಕ ಮಗುವಿಗೆ ನ್ಯಾಯ ಸಿಗಬೇಕು ಅಲ್ಲಿಯವರೆಗೆ ನಾವು ಬಿಡುವುದಿಲ್ಲ ಎಂದಿದ್ದಾರೆ.

ಅಶೋಕ್ ಗೆಹ್ಲೋಟ್ ಸರ್ಕಾರದ ಅಧಕ್ಷತೆಯಿಂದಾಗಿ ನಿರಂಕುಶಾಧಿಕಾರಿಗಳಾಗಿರುವ ಪೊಲೀಸರು, ಚುನಾವಣೆಯಂತಹ ಸೂಕ್ಷ್ಮ ಸಂದರ್ಭದಲ್ಲೂ ದೌರ್ಜನ್ಯ ಎಸಗಲು ಹಿಂಜರಿಯುತ್ತಿಲ್ಲ ಎಂದು ಅವರು ಹೇಳಿದರು.

Leave a Reply

error: Content is protected !!