ಉಡುಪಿ: ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಹತ್ಯೆ: ದುಷ್ಕರ್ಮಿ ಪರಾರಿ

ಶೇರ್ ಮಾಡಿ

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರ ಬರ್ಬರ ಹತ್ಯೆ ನಡೆದಿರುವಂತಹ ಘಟನೆ ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ನಡೆದಿದೆ. ತಾಯಿ, ಮೂವರು ಮಕ್ಕಳನ್ನು ಕೊಲೆಗೈದು ದುಷ್ಕರ್ಮಿ ಪರಾರಿ ಆಗಿದ್ದಾನೆ. ಹಸೀನಾ(46), ಅಫ್ನಾನ್(23), ಅಯ್ನಾಝ್(21) ಆಸೀಂ(12) ಮೃತರು. ಘಟನಾ ಸ್ಥಳಕ್ಕೆ ಮಲ್ಪೆ ಠಾಣೆಯ ಪೊಲೀಸರು ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

ಇಂದು ಮುಂಜಾನೆ 8.30 ರ ವೇಳೆಯಲ್ಲಿ ಘಟನೆ ನಡೆದಿದೆ. ಮಾಸ್ಕ್ ಹಾಕಿಕೊಂಡು ಬಂದು ಏಕಾಏಕಿ ಮನೆಗೆ ನುಗ್ಗಿದ್ದಾರೆ. ಮೊದಲು ಮಹಿಳೆ ಹಾಗೂ ಮಕ್ಕಳಾದ ಹಸಿನಾ, ಅಫಫಾನ್, ಐನಾಜ್​ಗೆ ಚಾಕುವಿನಿಂದ ಇರಿಯಲಾಗಿದೆ. ಸದ್ದು ಕೇಳಿ ಆಟವಾಡುತ್ತಿದ್ದ ಆಸೀಮ್ ಹೊರ ಬರುತ್ತಿದ್ದಂತೆ ಇರಿದು ಕೊಂದಿದ್ದಾರೆ.

ಬೊಬ್ಬೆ ಕೇಳಿ ಹೊರಗಡೆ ಬಂದ ಪಕ್ಕದ ಮನೆ ಯುವತಿಯನ್ನು ಬೆದರಿಸಿ ಸ್ಥಳದಿಂದ ಕಾಲ್ಕಿತ್ತಿದ್ದಾರೆ. ಮನೆಯೊಳಗಿದ್ದ ಅತ್ತೆಗೂ ತೀವ್ರ ತರದ ಗಾಯಗಳಾಗಿವೆ. ಪತಿ ವಿದೇಶದಲ್ಲಿ ಉದ್ಯೋಗ ಮಾಡುತ್ತಿದ್ದಾರೆ. ಸ್ಥಳಕ್ಕೆ ಎಸ್​.ಪಿ ಅರುಣ್ ಕುಮಾರ್ ಭೇಟಿ ನೀಡಿ ಪರಿಶೀಲನೆ ಮಾಡಿದ್ದಾರೆ.

Leave a Reply

error: Content is protected !!