ಬೈಕ್ ಗೆ ಕೆಎಸ್ಸಾರ್ಟಿಸಿ ಬಸ್ ಡಿಕ್ಕಿಯಾಗಿ ತಂದೆ & ಮಗ ಸಾವು

ಶೇರ್ ಮಾಡಿ

ಬೈಕ್ ಮತ್ತು ಕೆಎಸ್ಆರ್ ಟಿಸಿ ಬಸ್ ನಡುವೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ತಂದೆ ಮಗ ಸಾವಿಗೀಡಾಗಿರುವ ಘಟನೆ ಚನ್ನಪಟ್ಟಣ ತಾಲೂಕಿನ ತಿಟ್ಟಮಾರನಹಳ್ಳಿ ಗ್ರಾಮದ ಕೆರೆ ಏರಿ ರಸ್ತೆಯಲ್ಲಿ ಸೋಮವಾರ ಬೆಳಿಗ್ಗೆ ಸಂಭವಿಸಿದೆ.

ಸಿದ್ದಯ್ಯ (58) ಇವರ ಮಗ ಅರುಣ್ (27) ಮೃತ ದುರ್ದೈವಿಗಳು. ಚನ್ನಪಟ್ಟಣ ತಾಲ್ಲೂಕಿನ ಕೋಟಮಾರನಹಳ್ಳಿ ಗ್ರಾಮದ ಇವರು ಕೆಲಸ ನಿಮ್ಮಿತ್ತ ಚನ್ನಪಟ್ಟಣಕ್ಕೆ ಬೈಕ್ ನಲ್ಲಿ ಬರುವಾಗ ಎದುರಿನಿಂದ ಬಂದ ಕೆಎಸ್ ಆರ್ಟಿಸಿ ಬಸ್ಸು ಇವರ ಬೈಕ್ ಗೆ ಡಿಕ್ಕಿ ಹೊಡೆದಿದೆ. ಅಪಘಾತದಲ್ಲಿ ಅರುಣ್ ಸ್ಥಳದಲ್ಲೇ ಸಾವಿಗೀಡಾದರೆ‌ ಸಿದ್ದಯ್ಯ ಆಸ್ಪತ್ರೆಗೆ ಕರೆದೊಯ್ಯುವಾಗ ಸಾವಿಗೀಡಾಗಿದ್ದಾರೆ.

ಬೈಕ್ ಗೆ ಡಿಕ್ಕಿ ಹೊಡೆದ ಬಸ್ಸು ಕೆರೆ ಏರಿಯ ಬದಿಯಲ್ಲಿ ಅಳವಡಿಸಿದ್ದ ಬ್ಯಾರಿಕೇಡ್ ಗೆ ಡಿಕ್ಕಿ ಹೊಡೆದು ನಿಂತಿದೆ. ಕೆರೆ ಏರಿ ರಸ್ತೆ ಬದಿಯಲ್ಲಿ ತಡೆಗೋಡೆ ಇದ್ದ ಕಾರಣ ಬಸ್ ನಲ್ಲಿದ್ದ ಪ್ರಯಾಣಿಕರು ಯಾವುದೇ ಅಪಾಯವಿಲ್ಲದೆ ಪಾರಾಗಿದ್ದಾರೆ.

ಘಟನೆಗೆ ಸಂಬಂಧಿಸಿದಂತೆ ಚನ್ನಪಟ್ಟಣ ಸಂಚಾರ ಪೊಲೀಸ್ ಠಾಣೆಯಲ್ಲಿ ದೂರು ದಾಖಲಾಗಿದ್ದು ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!