ಅಪ್ರಾಪ್ತ ಬಾಲಕಿ ಮೇಲೆ ಅತ್ಯಾಚಾರ; ಬಾಲಕಿ ಗರ್ಭಿಣಿ – ಆರೋಪಿ ಕೇಶವ ಪೂಜಾರಿ ಬಂಧನ

ಶೇರ್ ಮಾಡಿ

ಧರ್ಮಸ್ಥಳ ಇಲ್ಲಿನ ನಾರ್ಯ ಎಂಬಲ್ಲಿನ ನಿವಾಸಿ ಖಾಸಗಿ ಶಾಲೆಯಲ್ಲಿ ಹತ್ತನೇ ತರಗತಿಯಲ್ಲಿ ಓದುತ್ತಿರುವ ಅಪ್ರಾಪ್ತ ಬಾಲಕಿಯ ಮೇಲೆ ಅತ್ಯಾಚಾರ ನಡೆಸಿ ಆಕೆಯನ್ನು ಗರ್ಭಿಣಿಯನ್ನಾಗಿಸಿರುವ ಆರೋಪದಲ್ಲಿ ಧರ್ಮಸ್ಥಳ ಗ್ರಾಮದ ನಾರ್ಯದ ನಿವಾಸಿ ಎಲೆಕ್ಟ್ರಿಷಿಯನ್ ಕೇಶವ ಪೂಜಾರಿ ಎಂಬಾತನನ್ನು ಬಂಧಿಸಲಾಗಿರುವ ಬಗ್ಗೆ ಮಾಹಿತಿ ಬಂದಿದೆ.

ಬಾಲಕಿ ಐದು ತಿಂಗಳ ಗರ್ಭಿಣಿಯಾದಾಗಲೇ ಮನೆಯವರಿಗೆ ಘಟನೆಯ ಬಗ್ಗೆ ಮಾಹಿತಿ ಲಭಿಸಿದೆ. ಈ ಬಗ್ಗೆ ಬಾಲಕಿಯ ತಾಯಿ ನೀಡಿದ ದೂರಿನಂತೆ ಬೆಳ್ತಂಗಡಿ ಪೊಲೀಸ್ ಠಾಣೆಗೆ ದೂರು ನೀಡಿದ್ದರು.

ಪ್ರಕರಣ ದಾಖಲಿಸಿಕೊಂಡ ಪೊಲೀಸರು ಇದೀಗ ಆರೋಪಿಯನ್ನು ಬಂಧಿಸುವಲ್ಲಿ ಯಶಸ್ವಿಯಾಗಿದ್ದಾರೆ. ಫೋಕ್ಸೋ ಕಾಯ್ದೆಯಡಿ ಪ್ರಕರಣ ದಾಖಲಿಸಲಾಗಿದೆ.

Leave a Reply

error: Content is protected !!