ಉಡುಪಿಯಲ್ಲಿ ಒಂದೇ ಕುಟುಂಬದ ನಾಲ್ವರ ಹತ್ಯೆ; ಕುಡಚಿಯಲ್ಲಿ ಆರೋಪಿಯ ಬಂಧನ

ಶೇರ್ ಮಾಡಿ

ಚಾಕುವಿನಿಂದ ಇರಿದು ಒಂದೇ ಕುಟುಂಬದ ನಾಲ್ವರನ್ನು ಬರ್ಬರವಾಗಿ ಹತ್ಯೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಬೆಳಗಾವಿ ಜಿಲ್ಲೆಯ ರಾಯಬಾಗ ತಾಲೂಕಿನ ಕುಡಚಿಯಲ್ಲಿ ಕೊಲೆ ಆರೋಪಿಯನ್ನು ಉಡುಪಿ ಪೊಲೀಸರು ಬಂಧಿಸಿದ್ದಾರೆ. ಪ್ರವೀಣ್​​ ಬಂಧಿತ ಆರೋಪಿ. CRPF ಸಿಬ್ಬಂದಿಯಾಗಿದ್ದ ಪ್ರವೀಣ್​​​​ ಅರುಣ್​​​ ಚೌಗಲೆ, ಮಂಗಳೂರು ಏರ್​ಪೋರ್ಟ್​ನಲ್ಲಿ ಕೆಲಸ ಮಾಡುತ್ತಿದ್ದ. ಇನ್ನು ಆರೋಪಿಯನ್ನು ಬಂಧಿಸಿದ ಪೊಲೀಸರು ಉಡುಪಿಗೆ ಕರೆದೊಯ್ದಿದ್ದಾರೆ.

ಅನೈತಿಕ ಸಂಬಂಧಕ್ಕೆ ನಡೆಯಿತಾ ಈ ಹತ್ಯೆ?
ಆರೋಪಿ ಮಹಾರಾಷ್ಟ್ರ ಸಾಂಗ್ಲಿ ಮೂಲದ ಪ್ರವೀಣ್​​​​ ಅರುಣ್​​​ ಚೌಗಲೆ ಎಂಬಾತ CRPF ಸಿಬ್ಬಂದಿಯಾಗಿದ್ದು, ಮಂಗಳೂರು ಏರ್​ಪೋರ್ಟ್ ಸೆಕ್ಯೂರಿಟಿಯಲ್ಲಿ ಕೆಲಸ ಮಾಡುತ್ತಿದ್ದ ಎಂಬ ಮಾಹಿತಿ ಬಂದಿದೆ. ಇನ್ನು ಈತ ಹತ್ಯೆ ಮಾಡಿ ಕುಡಚಿಯ ಸಂಬಂಧಿ ಮನೆಯಲ್ಲಿ ಅಡಗಿ ಕುಳಿತಿದ್ದ. ಮೊಬೈಲ್​​ ಟವರ್​ ಲೊಕೇಶನ್​​​ ಆಧರಿಸಿ ಆರೋಪಿಯನ್ನು ಅರೆಸ್ಟ್ ಮಾಡಲಾಗಿದೆ.​​ ಮೇಲ್ನೋಟಕ್ಕೆ ಈ ಹತ್ಯೆ ಅನೈತಿಕ ಸಂಬಂಧ ಹಿನ್ನೆಲೆಯಲ್ಲಿ ನಡೆದಿರುವ ಶಂಕೆ ವ್ಯಕ್ತವಾಗಿದೆ.

ಘಟನೆ ವಿವರ
ಉಡುಪಿ ತಾಲೂಕಿನ ನೇಜಾರು ಸಮೀಪದ ತೃಪ್ತಿನಗರದಲ್ಲಿ ಇದೇ ನವೆಂಬರ್ 12 ರಂದು ಒಂದೇ ಕುಟುಂಬದ ನಾಲ್ವರನ್ನು ಚಾಕುವಿನಿಂದ ಇರಿದು ಕೊಂದ ಧಾರುಣ ಘಟನೆ ನಡೆದಿತ್ತು.

ದುಷ್ಕರ್ಮಿಯೊಬ್ಬ ಮನೆಗೆ ನುಗ್ಗಿ, ಓರ್ವ ಮಹಿಳೆ ಹಸೀನಾ ಹಾಗೂ ಆಕೆಯ 11ವರ್ಷದ ಬಾಲಕ ಅಫ್ನಾನ್, ಇಬ್ಬರು ಹೆಣ್ಣು ಮಕ್ಕಳಾದ ಅಯ್ನಾಝ್ ಮತ್ತು ಹಾಸೀಂ ಎಂಬುವವರನ್ನು ಬರ್ಬರವಾಗಿ ಕೊಲೆ ಮಾಡಿ ಪರಾರಿಯಾಗಿದ್ದ. ಇದರ ಜೊತೆಗೆ ಕೊಲೆಯಾದ ಮಹಿಳೆ ಹಸೀನಾಳ ಅತ್ತೆಯ ಮೇಲೂ ಹಲ್ಲೆ ನಡೆಸಿ ಎಸ್ಕೇಪ್ ಆಗಿದ್ದ. ಈ ಪ್ರಕರಣಕ್ಕೆ ಸಂಬಂಧಿದಂತೆ ತನಿಖೆ ಕೈಗೊಂಡ ಪೊಲೀಸರು, ಆರೋಪಿ ಪತ್ತೆಯಾಗಿ ಬರೊಬ್ಬರಿ 5 ತಂಡಗಳನ್ನು ರಚನೆ ಮಾಡಿದ್ದರು. ಅದರಂತೆ ಇದೀಗ ಕುಡಚಿಯಲ್ಲಿ ಹಂತಕ ಸಿಕ್ಕಿಬಿದ್ದಿದ್ದು, ಪೊಲೀಸರು ಆತನನ್ನು ಉಡುಪಿಗೆ ಕರೆದೊಯ್ದಿದ್ದಾರೆ.

Leave a Reply

error: Content is protected !!