ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಹಾಗೂ ನೂತನ ಪ್ರಾಂಶುಪಾಲರಿಗೆ ಸ್ವಾಗತ ಕಾರ್ಯಕ್ರಮ

ಶೇರ್ ಮಾಡಿ

ನೆಲ್ಯಾಡಿ ಜ್ಞಾನೋದಯ ಬೆಥನಿ ಪದವಿಪೂರ್ವ ಕಾಲೇಜಿನಲ್ಲಿ ಮಕ್ಕಳ ದಿನಾಚರಣೆ ಕಾರ್ಯಕ್ರಮವನ್ನು ವಿದ್ಯಾಸಂಸ್ಥೆಯಲ್ಲಿ ಬಹಳ ವಿಶೇಷವಾಗಿ ಹಮ್ಮಿಕೊಳ್ಳಲಾಯಿತು.

ಕಾರ್ಯಕ್ರಮದ ಅಂಗವಾಗಿ ಶಿಕ್ಷಕರಿಂದ ವಿದ್ಯಾರ್ಥಿಗಳಿಗೆ ಅಭಿನಂದನ ಗೀತೆಯನ್ನು ಹಾಡಿ ಅಭಿನಂದಿಸಲಾಯಿತು. ರೆ.ಫಾ.ಸತ್ಯಂ ತೋಮಸ್ ಓ ಐ ಸಿ ಯವರು ವಿದ್ಯಾರ್ಥಿಗಳು ಜೀವನದಲ್ಲಿ ಉತ್ತಮ ಮೌಲ್ಯಗಳನ್ನು ರೂಢಿಸಿಕೊಳ್ಳಬೇಕು ಎಂದು ಕಿವಿಮಾತು ಹೇಳಿದರು. ಸಂಸ್ಥೆಯ ಸಂಚಾಲಕ ರೆ.ಫಾ.ಜೈಸನ್ ಸೈಮನ್ ಒಐಸಿ ಅವರು ನೂತನ ಪ್ರಾಂಶುಪಾಲರಾದ ರೆ.ಫಾ.ವರ್ಗೀಸ್ ಕೈಪನಡ್ಕರಿಗೆ ಸ್ವಾಗತವನ್ನು ಕೋರಿ ಅವರ ಪರಿಚಯವನ್ನು ಮಾಡಿಕೊಟ್ಟರು.

ನೂತನ ಪ್ರಾಂಶುಪಾಲರು ವಿದ್ಯಾರ್ಥಿಗಳು ಶಿಸ್ತನ್ನು ಮೈಗೂಡಿಸಿಕೊಳ್ಳಬೇಕು ಹಾಗೂ ಶಿಕ್ಷಕರು ಸಕ್ರಿಯವಾಗಿ ಕಾರ್ಯ ನಿರ್ವಹಿಸಬೇಕೆಂದು ಸಲಹೆ ನೀಡಿದರು.

ಪ್ರತಿಭಾ ಕಾರಂಜಿ ಸ್ಪರ್ಧೆಯಲ್ಲಿ ಬಹುಮಾನಗಳಿಸಿದ ವಿದ್ಯಾರ್ಥಿಗಳನ್ನು ಈ ಸಂದರ್ಭ ಅಭಿನಂದಿಸಲಾಯಿತು.

ಜವಾಹರ್ ಲಾಲ್ ನೆಹರು ರವರ ಭಾವಚಿತ್ರಕ್ಕೆ ಪುಷ್ಪಾರ್ಚನೆಯನ್ನು ಮಾಡಲಾಯಿತು. ಶಾಲಾ ಬೋಧಕ ಮತ್ತು ಬೋಧಕೇತರ ಸಿಬ್ಬಂದಿಗಳು ವಿದ್ಯಾರ್ಥಿಗಳು ಉಪಸ್ಥಿತರಿದ್ದರು.

Leave a Reply

error: Content is protected !!
%d