ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ- ಚಿಂತಾಜನಕ ಸ್ಥಿತಿಯಲ್ಲಿ ಬೈಕ್ ಸವಾರ

ಶೇರ್ ಮಾಡಿ

ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ನ.16ರಂದು ಮಧ್ಯಾಹ್ನ ನಡೆದಿದೆ.

ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್(23ವ.) ಗಾಯಗೊಂಡವರಾಗಿದ್ದಾರೆ.

ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ.

ಲಾರಿ ಚಾಲಕ ಕೋಲ್ಪೆ ಎಂಬಲ್ಲಿ ಲಾರಿ ನಿಲ್ಲಿಸಿ ಹೊಟೇಲ್ ಗೆ ಊಟಕ್ಕೆ ಹೋಗಿದ್ದರು ಎಂದು ವರದಿಯಾಗಿದೆ. ಗಾಯಾಳು ಬೈಕ್ ಸವಾರ ದೀಕ್ಷಿತ್ ಚಿಂತಾಜನಕ ಸ್ಥಿತಿಯಲ್ಲಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

Leave a Reply

error: Content is protected !!
%d bloggers like this: