ನೆಲ್ಯಾಡಿ: ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿ- ಚಿಂತಾಜನಕ ಸ್ಥಿತಿಯಲ್ಲಿದ್ದ ಬೈಕ್ ಸವಾರ ಆಸ್ಪತ್ರೆಯಲ್ಲಿ ನಿಧನ

ಶೇರ್ ಮಾಡಿ

ನೆಲ್ಯಾಡಿ: ಮಂಗಳೂರು- ಬೆಂಗಳೂರು ರಾಷ್ಟ್ರೀಯ ಹೆದ್ದಾರಿ 75ರ ಕೊಣಾಲು ಗ್ರಾಮದ ಕೋಲ್ಪೆ ಮಸೀದಿ ಮುಂಭಾಗದಲ್ಲಿ ನಿಲ್ಲಿಸಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿ ಬೈಕ್ ಸವಾರ ತೀವ್ರ ಗಾಯಗೊಂಡಿರುವ ಘಟನೆ ನ.16ರಂದು ಮಧ್ಯಾಹ್ನ ನಡೆದಿತ್ತು.

ಆತನನ್ನು ತಕ್ಷಣ ನೆಲ್ಯಾಡಿಯ ಅಶ್ವಿನಿ ಆಂಬುಲೆನ್ಸ್ ನಲ್ಲಿ ಮಂಗಳೂರಿನ ಖಾಸಗಿ ಆಸ್ಪತ್ರೆಗೆ ಕೊಂಡೊಯ್ಯಲಾಯಿತು. ಆಸ್ಪತ್ರೆಯಲ್ಲಿ ಚಿಕಿತ್ಸೆ ಫಲಕಾರಿಯಾಗದೆ ಮೃತಪಟ್ಟಿದ್ದಾರೆ.

ಮೃತಪಟ್ಟ ವ್ಯಕ್ತಿಯನ್ನು ಬಂಟ್ವಾಳ ತಾಲೂಕು ಕರೋಪಾಡಿ ನಿವಾಸಿ ದೀಕ್ಷಿತ್(23ವ.) ಎಂದು ಗುರುತಿಸಲಾಗಿದೆ.

ಘಟನೆಯ ವಿವರ:
ಉಪ್ಪಿನಂಗಡಿ ಕಡೆಯಿಂದ ನೆಲ್ಯಾಡಿ ಕಡೆಗೆ ಬೈಕ್ ಚಲಾಯಿಸಿಕೊಂಡು ಬರುತ್ತಿದ್ದ ವೇಳೆ ಕೋಲ್ಪೆ ಎಂಬಲ್ಲಿ ರಾಷ್ಟ್ರೀಯ ಹೆದ್ದಾರಿ ಬದಿ ನಿಂತಿದ್ದ ಲಾರಿಗೆ ಬೈಕ್ ಡಿಕ್ಕಿಯಾಗಿದೆ.

ಲಾರಿ ಚಾಲಕ ಕೋಲ್ಪೆ ಎಂಬಲ್ಲಿ ಲಾರಿ ನಿಲ್ಲಿಸಿ ಹೊಟೇಲ್ ಗೆ ಊಟಕ್ಕೆ ಹೋಗಿದ್ದರು ಎಂದು ವರದಿಯಾಗಿದೆ. ಗಾಯಾಳು ಬೈಕ್ ಸವಾರ ದೀಕ್ಷಿತ್ ಚಿಂತಾಜನಕ ಸ್ಥಿತಿಯಲ್ಲಿದ್ದು ಅವರನ್ನು ಮಂಗಳೂರು ಆಸ್ಪತ್ರೆಗೆ ಕರೆದೊಯ್ಯಲಾತ್ತು.

Leave a Reply

error: Content is protected !!