ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಡಾ. ಅನುರಾಧಾ ಕುರುಂಜಿಯವರಿಗೆ ಗೌರವಾರ್ಪಣೆ

ಶೇರ್ ಮಾಡಿ

ಸುಳ್ಯ:ಇತ್ತೀಚೆಗೆ  ಡಾ. ಸರ್ವಪಲ್ಲಿ ರಾಧಾಕೃಷ್ಣನ್ ರಾಷ್ಟ್ರೀಯ ಪ್ರಶಸ್ತಿ ಪಡೆದ ಉಪನ್ಯಾಸಕರು ಹಾಗೂ ವ್ಯಕ್ತಿತ್ವ ವಿಕಸನ ತರಬೇತುದಾರರು ಆದ  ಡಾ. ಅನುರಾಧಾ ಕುರುಂಜಿಯವರನ್ನು ಕಳೆದ ಗುರುವಾರ ಮಲೆನಾಡು ಚಾರಿಟೇಬಲ್ ಟ್ರಸ್ಟ್ ವತಿಯಿಂದ ಶಾಲು ಹೊದಿಸಿ ಗೌರವಿಸಲಾಯಿತು.

ಸುಳ್ಯದ ಉದ್ಯಮಿ ಹನೀಫ್  ಬುಶ್ರಾ ರವರ ನಿವಾಸ “ಮೆಹಫಿಲ್” ನಲ್ಲಿ ನಡೆದ ಕಾರ್ಯಕ್ರಮದಲ್ಲಿ ಹಿರಿಯ ಚಲನಚಿತ್ರ ನಿರ್ದೇಶಕರಾದ ರಮೇಶ್ ಭಟ್ ರವರು ಶಾಲು ಹೊದಿಸಿ ಗೌರವಿಸಿ ಶುಭ ಹಾರೈಸಿದರು.

ಕಾರ್ಯಕ್ರಮದಲ್ಲಿ ಮಲ್ನಾಡ್ ಚಾರಿಟೇಬಲ್ ಟ್ರಸ್ಟ್ ನ ಅಧ್ಯಕ್ಷ ರಿಯಾಜ್ ಕಟ್ಟೆಕ್ಕಾರ್, ದೇವಚಳ್ಳ ಗ್ರಾಮ ಪಂಚಾಯತ್ ಅಧ್ಯಕ್ಷ ಶೈಲೇಶ್ ಅಂಬೆಕಲ್ಲು , ಉದ್ಯಮಿ ಹನೀಫ್ ಬುಶ್ರಾ, ಮಯೂರ್ ಅಂಬೆಕಲ್ಲು ಮೊದಲಾದವರು ಉಪಸ್ಥಿತರಿದ್ದರು.

Leave a Reply

error: Content is protected !!