ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಢಿಕ್ಕಿ; ಮೂವರು ಗಂಭೀರ ಗಾಯ

ಶೇರ್ ಮಾಡಿ

ಕಬಕ-ವಿಟ್ಲ ರಸ್ತೆಯ ಕಂಬಳಬೆಟ್ಟುವಿನಲ್ಲಿ ದ್ವಿಚಕ್ರ ವಾಹನಗಳೆರಡು ಮುಖಾಮುಖಿ ಢಿಕ್ಕಿಯಾಗಿ ಮೂವರು ಗಂಭೀರ ಗಾಯಗೊಂಡಿದ್ದಾರೆ.

ಉರಿಮಜಲು ಸಮೀಪ ರಿಂಗ್ ಕೆಲಸ ನಿರ್ವಹಿಸುತ್ತಿದ್ದ ಕೇರಳ ಕೊಲ್ಲಂ ಮೂಲದ ದಿನೇಶ್, ಅಡ್ಯನಡ್ಕ ಮೂಲದ ಸತೀಶ್, ವಸಂತ್ ಗಾಯಗೊಂಡವರು.

ಕಂಬಳಬೆಟ್ಟು ದರ್ಗಾ ಬಳಿಯಲ್ಲಿ ಈ ಅಪಘಾತ ಸಂಭವಿಸಿದ್ದು, ಸ್ಥಳೀಯರು ಗಾಯಾಳುಗಳನ್ನು ಪುತ್ತೂರು ಖಾಸಗಿ ಆಸ್ಪತ್ರೆಗೆ ದಾಖಲಿಸಿದ್ದಾರೆ. ಮೂವರು ಗಂಭೀರ ಗಾಯಗೊಂಡಿದ್ದು, ತೀವ್ರ ನಿಗಾ ಘಟಕದಲ್ಲಿ ಚಿಕಿತ್ಸೆ ನೀಡಲಾಗುತ್ತಿದೆ.

Leave a Reply

error: Content is protected !!
%d bloggers like this: