ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್ ಕಂಬಕ್ಕೆ ಢಿಕ್ಕಿ ಹೊಡೆದ ಕಾರು

ಶೇರ್ ಮಾಡಿ

ಕಡಬ: ಬೊಲೆರೋ ಕಾರೊಂದು ಕಡಬ-ಪಂಜ ರಸ್ತೆಯ ಕೋಡಿಂಬಾಳ ತಿರುವಿನಲ್ಲಿ ಚಾಲಕನ ನಿಯಂತ್ರಣ ತಪ್ಪಿ ವಿದ್ಯುತ್‌ ಕಂಬಕ್ಕೆ ಢಿಕ್ಕಿಯಾಗಿ ವಾಹನದಲ್ಲಿದ್ದವರು ಪವಾಡ ಸದೃಶವಾಗಿ ಅಪಾಯದಿಂದ ಪಾರಾದ ಘಟನೆ ರವಿವಾರ ಬೆಳಗ್ಗೆ ಸಂಭವಿಸಿದೆ.

ಸುಳ್ಯ ತಾಲೂಕು ಕಲ್ಲುಗುಂಡಿಯ ಚೇತನ್‌ ಅವರು ಮನೆಯವರ ಜೊತೆಗೆ ಕಾರ್ಯಕ್ರಮದ ನಿಮಿತ್ತ ವಾಹನದಲ್ಲಿ ಧರ್ಮಸ್ಥಳದತ್ತ ತೆರಳುತ್ತಿದ್ದಾಗ ಅಪಘಾತ ನಡೆದಿದೆ. ವಾಹನದಲ್ಲಿ ಮಗು ಸಹಿತ ಮೂರು ಮಂದಿ ಪ್ರಯಾಣಿಸುತ್ತಿದ್ದು ಎಲ್ಲರೂ ಅಪಾಯದಿಂದ ಪಾರಾಗಿದ್ದಾರೆ. ವಾಹನ ಜಖಂ ಗೊಂಡಿದ್ದು ಅಪಘಾತದ ರಭಸಕ್ಕೆ ವಿದ್ಯುತ್‌ ಕಂಬ ಮುರಿದು ಬಿದ್ದಿದೆ.

ಸ್ಥಳೀಯರು ಕೂಡಲೇ ಆಗಮಿಸಿ ವಾಹನದಲ್ಲಿದ್ದವರನ್ನು ಉಪಚರಿಸಿದ್ದಾರೆ. ಕಡಬ ಪೊಲೀಸರು ಹಾಗೂ ಮೆಸ್ಕಾಂ ಅಧಿಕಾರಿಗಳು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!
%d bloggers like this: