ಎನ್ನೆಸ್ಸೆಸ್ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಉಜಿರೆ SDM ಕಾಲೇಜಿನ ಸುದರ್ಶನ ನಾಯಕ್ ಆಯ್ಕೆ

ಶೇರ್ ಮಾಡಿ

ಉಜಿರೆ : ಉಜಿರೆಯ ಶ್ರೀ ಧರ್ಮಸ್ಥಳ ಮಂಜುನಾಥೇಶ್ವರ ಪದವಿಪೂರ್ವ ಕಾಲೇಜಿನ ದ್ವಿತೀಯ ಪಿಯುಸಿ ವಾಣಿಜ್ಯಶಾಸ್ತ್ರ ವಿದ್ಯಾರ್ಥಿ ಹಾಗೂ ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ಘಟಕದ ನಾಯಕ ಸುದರ್ಶನ ನಾಯಕ್ ಇವರು ನ.22 ರಿಂದ 28ರ ತನಕ ಕಾರವಾರದ ಕರ್ನಾಟಕ ವಿಶ್ವವಿದ್ಯಾಲಯದ ಪಿಜಿ ಸೆಂಟರ್ ನಲ್ಲಿ ನಡೆಯುವ ರಾಷ್ಟ್ರೀಯ ಸೇವಾ ಯೋಜನೆಯ ರಾಷ್ಟ್ರೀಯ ಭಾವೈಕ್ಯ ಶಿಬಿರಕ್ಕೆ ಆಯ್ಕೆ ಆಗಿದ್ದಾರೆ.

ಇವರು ಕಾಲೇಜಿನ ರಾಷ್ಟ್ರೀಯ ಸೇವಾ ಯೋಜನೆಯ ನಾಯಕನಾಗಿ ವಿವಿಧ ವ್ಯಕ್ತಿತ್ವ ವಿಕಸನ ಕಾರ್ಯಕ್ರಮ, ಸ್ವಚ್ಛತಾ ಅಭಿಯಾನ, ಏಕ ದಿನ ಶಿಬಿರ ಹಾಗೂ ವಾರ್ಷಿಕ ಶಿಬಿರಗಳನ್ನು ನಡೆಸಲು ನಾಯಕತ್ವ ವಹಿಸಿದ್ದಾರೆ. ಹೋದ ವರ್ಷ ಬೆಂಗಳೂರಿನಲ್ಲಿ ನಡೆದ ರಾಜ್ಯ ಮಟ್ಟದ ಭಾವೈಕ್ಯ ಶಿಬಿರದಲ್ಲಿ ಭಾಗವಹಿಸಿದ್ದಾರೆ. ಇತ್ತೀಚಿಗೆ ಸಿ.ಎಸ್ ಫೌಂಡೇಶನ್ ಪರೀಕ್ಷೆಯಲ್ಲಿ ಉತ್ತೀರ್ಣರಾಗಿರುತ್ತಾರೆ.

Leave a Reply

error: Content is protected !!