ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡುವಂತೆ ಸುಳ್ಯ ಶಾಸಕರಾದ ಭಾಗೀರಥಿ ಮುರುಳ್ಯ ಹಾಗೂ ಭಾರತೀಯ ಜನತಾ ಪಾರ್ಟಿ ಸುಳ್ಯ ಮಂಡಲದ ಅಧ್ಯಕ್ಷರಾದ ಹರೀಶ್ ಕಂಜಿಪಿಲಿ ಯವರು ದಕ್ಷಿಣ ಕನ್ನಡ ಜಿಲ್ಲಾ ಸಂಸದರಾದ ನಳಿನ್ ಕುಮಾರ್ ಕಟೀಲ್ ಅವರಿಗೆ ಪತ್ರದ ಮುಖೇನ ಮನವಿಯನ್ನು ಸಲ್ಲಿಸಿದ್ದಾರೆ.
ದ.ಕ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.
ಈ ಸಂದರ್ಭದಲ್ಲಿ ನೆಲ್ಯಾಡಿ ಮಹಾಶಕ್ತಿ ಕೇಂದ್ರದ ಅಧ್ಯಕ್ಷರಾದ ಭಾಸ್ಕರ ಗೌಡ ಇಚ್ಲಂಪಾಡಿ,ಜಿಲ್ಲಾ ಪಂಚಾಯತ್ ಮಾಜಿ ಸದಸ್ಯ ಬಾಲಕೃಷ್ಣ ಬಾಣಜಾಲು, ಕಾರ್ಯದರ್ಶಿ ರವಿಪ್ರಸಾದ್ ಶೆಟ್ಟಿ ಬಲ್ಯ ಉಪಸ್ಥಿತರಿದ್ದರು.