ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಮುಖ್ಯಮಂತ್ರಿ ಸಿದ್ದರಾಮಯ್ಯ ಅವರಿಗೆ ಕಡಬ ಬ್ಲಾಕ್ ಕಾಂಗ್ರೆಸ್ ಅಧ್ಯಕ್ಷರಾದ ಸುಧೀರ್ ಶೆಟ್ಟಿ ಅವರು ಪತ್ರದ ಮುಖೇನ ಮನವಿ ಸಲ್ಲಿಸಿದರು.
ದ.ಕ ಜಿಲ್ಲೆಯ ಕಡಬ ತಾಲೂಕಿನ ನೆಲ್ಯಾಡಿ ಪೇಟೆಯಲ್ಲಿ ಬಿ.ಸಿ.ರೋಡ್- ಅಡ್ಡಹೊಳೆ ರಾಷ್ಟ್ರೀಯ ಹೆದ್ದಾರಿ ಕಾಮಗಾರಿ ನಡೆಯುತ್ತಿದ್ದು, ನೆಲ್ಯಾಡಿ ಪೇಟೆಯಲ್ಲಿ ಜನ, ವಾಹನ ಸಂಚಾರ ಹೆಚ್ಚಾಗಿರುವುದರಿಂದ ಹಾಗೂ ಸಾರ್ವಜನಿಕರ ಹಿತ ದೃಷ್ಟಿಯಿಂದ ಪ್ಲೈ ಓವರ್ ನಿರ್ಮಾಣ ಮಾಡಿಕೊಡುವಂತೆ ಮನವಿ ಸಲ್ಲಿಸಿದರು.