ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಫ್ಲೈಓವರ್‌ಗೆ ಬಸ್ ಡಿಕ್ಕಿ- ನಾಲ್ವರಿಗೆ ಗಾಯ

ಶೇರ್ ಮಾಡಿ

ಕೆಎಸ್‍ಆರ್ ಟಿಸಿ ಬಸ್ಸೊಂದು ಬೈಕ್ ಸವಾರನನ್ನು ರಕ್ಷಿಸಲು ಹೋಗಿ ಫ್ಲೈಓವರ್ ಗೆ ಡಿಕ್ಕಿ ಹೊಡೆದ ಘಟನೆ ಇಂದು ಬೆಳಗ್ಗೆ ಸಿಲಿಕಾನ್ ಸಿಟಿ ಬೆಂಗಳೂರು ಸಮೀಪ ನಡೆದಿದೆ.

ಮಾದವರ ನೈಸ್ ರಸ್ತೆಯ BIEC ಮೈದಾನದ ಸಮೀಪ ಈ ಅವಘಡ ನಡೆದಿದೆ. ಬಸ್ ಬೆಂಗಳೂರಿನಿಂದ ಸೋಮವಾರಪೇಟೆಗೆ ತೆರಳುತಿತ್ತು. ಈ ವೇಳೆ ಬೈಕ್ ಸವಾರನೊಬ್ಬ ಅಡ್ಡ ಬಂದಿದ್ದಾನೆ. ಇದನ್ನು ಗಮನಿಸಿದ ಬಸ್ ಚಾಲಕ ಆತನನ್ನು ರಕ್ಷಿಸುವ ಸಲುವಾಗಿ ಹೋಗಿ ಅವಘಡಕ್ಕೀಡಾಗಿದೆ. ಚಾಲಕನ ನಿಯಂತ್ರಣ ತಪ್ಪಿದ ಬಸ್ ಫ್ಲೈಓವರ್ ತಡೆಗೋಡೆಗೆ ಡಿಕ್ಕಿ ಹೊಡೆದು ನಿಂತಿದೆ.

ಸಲ್ಪ ಯಾಮಾರಿದರೂ ಭಾರೀ ಅನಾಹುತ ಸಂಭವಿಸುತ್ತಿತ್ತು. ಆದರೆ ಬಸ್ ಚಾಲಕನ ಸಮಯ ಪ್ರಜ್ಞೆಯಿಂದ ದುರಂತವೊಂದು ತಪ್ಪಿದಂತಾಗಿದೆ. ಬಸ್ ನಲ್ಲಿದ್ದ ನಾಲ್ಕು ಜನರಿಗೆ ಸಣ್ಣಪುಟ್ಟ ಗಾಯಗಳಾಗಿದ್ದು, ಆಸ್ಪತ್ರೆಗೆ ದಾಖಲು ಮಾಡಲಾಗಿದೆ.

ನೆಲಮಂಗಲ ಸಂಚಾರಿ ಪೊಲೀಸರು ಸ್ಥಳಕ್ಕೆ ಭೇಟಿ ನೀಡಿ ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!