ಕೊಟ್ಟಾರ ಚೌಕಿ ವೃತ್ತಕ್ಕೆ ಕ್ಯಾಪ್ಟನ್ ಪ್ರಾಂಜಲ್ ಹೆಸರು: ಶಾಸಕ ಭರತ್ ಶೆಟ್ಟಿ

ಶೇರ್ ಮಾಡಿ

ಕಾಶ್ಮೀರದ ರಜೌರಿಯಲ್ಲಿ ಉಗ್ರರೊಂದಿಗೆ ಹೋರಾಡಿ ದೇಶಕ್ಕಾಗಿ ಪ್ರಾಣವನ್ನೇ ಬಲಿದಾನ ಮಾಡಿದ ವೀರಯೋಧ ಕ್ಯಾಪ್ಟನ್ ಪ್ರಾಂಜಲ್ ಅವರ ಹೆಸರನ್ನು ಹೆದ್ದಾರಿ ಮತ್ತು ನಗರ ಸಂಪರ್ಕಿಸುವ ಕೊಟ್ಟಾರಚೌಕಿ ಜಂಕ್ಷನ್ ವೃತ್ತಕ್ಕೆ ಇಡಲಾಗುವುದು ಎಂದು ಶಾಸಕ ಡಾ.ಭರತ್ ಶೆಟ್ಟಿ ವೈ ತಿಳಿಸಿದ್ದಾರೆ.

ಕೊಟ್ಟಾರ ಚೌಕಿಯಲ್ಲಿ ಅಮರ್ ಜವಾನ್ ಥೀಮ್ ಪಾರ್ಕ್ ನಿರ್ಮಾಣವಾಗಲಿದೆ. ಜತೆಗೆ ಮಂಗಳೂರಿನಲ್ಲಿ ಕಲಿತು, ಬೆಳೆದು ಅವಿನಾಭಾವ ಸಂಬಂಧ ಹೊಂದಿರುವ ಕ್ಯಾ.ಪ್ರಾಂಜಲ್ ಹೆಸರಿಡುವುದು ಸೂಕ್ತವಾಗಿದೆ. ಈ ಬಗ್ಗೆ ಮಂಗಳೂರು ಮಹಾನಗರ ಪಾಲಿಕೆ ಕ್ರಮ ಕೈಗೊಳ್ಳುವಂತೆ ಪತ್ರ ಬರೆದು ಸೂಚನೆ ನೀಡಲಾಗುವುದು ಎಂದು ತಿಳಿಸಿದ್ದಾರೆ.

Leave a Reply

error: Content is protected !!