ನೆಲ್ಯಾಡಿ: 12 ಅಡಿ ಉದ್ದದ ಕಾಳಿಂಗ ಸರ್ಪ ಸೆರೆ

ಶೇರ್ ಮಾಡಿ

ನೆಲ್ಯಾಡಿಯ ಸೈಂಟ್ ಜೋಸೆಫ್ ಮಲಂಕರ ಚರ್ಚ್ ಪರಿಸರದಲ್ಲಿ ಎರಡು- ಮೂರು ದಿನಗಳಿಂದ ಸುಮಾರು 12 ಅಡಿ ಉದ್ದದ ಕಾಳಿಂಗ ಸರ್ಪವೊಂದು ಸುತ್ತಾಡಿಕೊಂಡಿತ್ತು.

ಈ ಬಗ್ಗೆ ಮಾಹಿತಿ ಪಡೆದ ಉಪ್ಪಿನಂಗಡಿಯ ಉರಗ ತಜ್ಞ ಕೆ.ಝಕರಿಯಾ ಅವರು ಅಲ್ಲಿಗೆ ತೆರಳಿ ಸುಮಾರು ಒಂದು ಗಂಟೆಯಷ್ಟು ಕಾರ್ಯಾಚರಣೆಯ ಬಳಿಕ ಕಾಳಿಂಗ ಸರ್ಪವನ್ನು ಹಿಡಿದು ಸುರಕ್ಷಿತವಾಗಿ ಗುಂಡ್ಯ ಬಳಿ ದಟ್ಟಾರಣ್ಯಕ್ಕೆ ಬಿಟ್ಟಿದ್ದಾರೆ.

Leave a Reply

error: Content is protected !!