ಅನೈತಿಕ ಪೊಲೀಸ್ ಗಿರಿ ಪ್ರಕರಣ; ಇಬ್ಬರ ಬಂಧನ

ಶೇರ್ ಮಾಡಿ

ಕೆಲಸ ಮುಗಿಸಿ ಮನೆಗೆ ತೆರಳುತ್ತಿದ್ದ ಅಂಗಡಿಯೊಂದರ ಇಬ್ಬರು ಉದ್ಯೋಗಿಗಳ ಮೇಲೆ ಅನೈತಿಕ ಪೊಲೀಸ್ ಗಿರಿ ಎಸಗಿದ ಇಬ್ಬರು ಆರೋಪಿಗಳನ್ನು ಪಾಂಡೇಶ್ವರ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳನ್ನು ಅಕ್ಷಯ್ ರಾವ್ ಮತ್ತು ಶಿಬಿನ್ ಪಡಿಕ್ಕಲ್ ಎಂದು ಗುರುತಿಸಲಾಗಿದೆ. ಸೋಮವಾರ ರಾತ್ರಿ ಸುಮಾರು 8 ಗಂಟೆಗೆ ನಗರದ ಮುಳಿಹಿತ್ಲು ಎಂಬಲ್ಲಿನ ಎಂಎಸ್ ಸ್ಪೋರ್ಟ್ಸ್ ಅಂಗಡಿಯಲ್ಲಿ ಕೆಲಸ ಮಾಡುತ್ತಿದ್ದ ನೂರುಲ್ಲಾ ಅಮೀನ್ ಮತ್ತು ಸೌಜನ್ಯಾ ಎಂಬವರು ಮೊಬೈಲ್ ರಿಪೇರ್ ಮಾಡಿಸಿಕೊಂಡು ನಗರದ ಮಿಲಾಗ್ರಿಸ್ ಚರ್ಚ್ ಕಡೆಯಿಂದ ಭಗಿನಿ ಸಮಾಜದ ಕಡೆಗೆ ಬೈಕ್ ನಲ್ಲಿ ತೆರಳುವಾಗ ಈ ಇಬ್ಬರು ಆರೋಪಿಗಳು ಬೈಕ್ ನಲ್ಲಿ ಹಿಂಬಾಲಿಸಿಕೊಂಡು ಬಂದು ಅನೈತಿಕ ಪೊಲೀಸ್ ಗಿರಿ ಎಸಗಿದ ಹಿನ್ನಲೆಯಲ್ಲಿ ಪೊಲೀಸರು ಬಂಧಿಸಿದ್ದಾರೆ.

ಆರೋಪಿಗಳ ವಿರುದ್ಧ ಐಪಿಸಿ ಸೆಕ್ಷನ್ 341, 354 ರ ಅಡಿ ಪ್ರಕರಣ ದಾಖಲಿಸಲಾಗಿದೆ ಎಂದು ತಿಳಿದು ಬಂದಿದೆ.

Leave a Reply

error: Content is protected !!