‘ಫಸ್ಟ್ ನೈಟ್ ವಿತ್ ದೆವ್ವ’ ಅಂತಾರೆ ಪ್ರಥಮ್: ಫೋಟೋ ವೈರಲ್

ಶೇರ್ ಮಾಡಿ

ಮೊನ್ನೆಯಷ್ಟೇ ಹೊಸ ಜೀವನಕ್ಕೆ ಕಾಲಿಟ್ಟಿರುವ ನಟ ಪ್ರಥಮ್, ಇದೀಗ ದೆವ್ವದ ಜೊತೆ ಫಸ್ಟ್ ನೈಟ್ ಮಾಡಿಕೊಳ್ಳಲು ಸಜ್ಜಾಗಿದ್ದಾರೆ. ಅವರೇ ಹೇಳಿಕೊಂಡಂತೆ ಮದುವೆ ಮುಗಿಸಿಕೊಂಡು ಫಸ್ಟ್ ನೈಟ್ ವಿತ್ ದೆವ್ವ ಸಿನಿಮಾದ ಶೂಟಿಂಗ್ ನಲ್ಲಿ ತೊಡಗಿಕೊಂಡಿದ್ದಾರೆ. ಸಿನಿಮಾದ ಫೋಟೋಶೂಟ್ ಒಂದರ ಫೋಟೋವನ್ನೂ ಅವರು ಹಂಚಿಕೊಂಡಿದ್ದಾರೆ.

ಇದೊಂದು ಹಾರಾರ್ ವಿತ್ ಕಾಮಿಡಿ ಜಾನರ್ ನ ಸಿನಿಮಾವಾಗಿದ್ದು, ಚಿತ್ರದ ಬಗ್ಗೆ ನಾಯಕ ಪ್ರಥಮ್ ಮುಹೂರ್ತ ದಿನ ಮಾತನಾಡಿದ್ದು, ಈ ಚಿತ್ರಕ್ಕೆ ನಾನೇ ಕಥೆ ಬರೆದಿದ್ದೇನೆ. ನಾನು ಈ ಚಿತ್ರಕ್ಕೆ ಕಥೆ ಬರೆಯಲು ವಿಕ್ರಮ್ ಮತ್ತು ಬೇತಾಳ ಕಥೆ ಸ್ಪೂರ್ತಿ. ಸಾಕಷ್ಟು ಹಾರಾರ್ ಚಿತ್ರ ಬಂದಿದೆ. ಆದರೆ ನಾವು ಸ್ವಲ್ಪ ವಿಭಿನ್ನವಾಗಿ ತೋರಿಸುತ್ತಿದ್ದೇವೆ‌. ನಿಖಿತ ಅವರು ನನ್ನ ಪತ್ನಿ ಪಾತ್ರದಲ್ಲಿ ಕಾಣಿಸಿಕೊಳ್ಳುತ್ತಿದ್ದಾರೆ. ಹಿರಿಯ ನಟರಾದ ಶ್ರೀನಿವಾಸಮೂರ್ತಿ, ಸಂಗೀತಾ, ಹರೀಶ್ ರಾಜ್, ತನುಜಾ ಮುಂತಾದವರು ಪ್ರಮುಖ ತಾರಾಬಳಗದಲ್ಲಿದ್ದಾರೆ. ಮಾನ್ಯ ಸಿಂಗ್ ದೆವ್ವದ ಪಾತ್ರ ಮಾಡುತ್ತಿದ್ದಾರೆ. ನನ್ನ ಸ್ನೇಹಿತ ನವೀನ್ ಈ ಚಿತ್ರ ನಿರ್ಮಿಸುತ್ತಿದ್ದಾರೆ ಎಂದು ತಿಳಿಸಿದ್ದರು.

ಪ್ರಥಮ್ ಬರೆದಿರುವ ಕಥೆ ಚೆನ್ನಾಗಿದೆ. ನಾನು ಛಾಯಾಗ್ರಹಣದೊಂದಿಗೆ ನಿರ್ದೇಶನವನ್ನು ಮಾಡುತ್ತಿದ್ದೇನೆ‌. ಇಂದಿನಿಂದ ಬೆಂಗಳೂರಿನಲ್ಲಿ ಚಿತ್ರೀಕರಣ ಆರಂಭವಾಗಿದೆ. ಹಾಡಿನ ಚಿತ್ರೀಕರಣ ಹೊರದೇಶದಲ್ಲಿ ನಡೆಯಲಿದೆ ಎಂದಿದ್ದರು ನಿರ್ದೇಶಕ ಪಿ.ವಿ.ಆರ್ ಸ್ವಾಮಿ. ಇದೀಗ ಬೆಂಗಳೂರಿನಿಂದಲೇ ತಮ್ಮ ಸಿನಿಮಾದ ಚಿತ್ರೀಕರಣವನ್ನು ಶುರು ಮಾಡಿದ್ದಾರೆ.

ನಿಖಿತ ಹಾಗೂ ಮಾನ್ಯ ಸಿಂಗ್ ಸಿನಿಮಾದ ನಾಯಕಿಯರಾಗಿದ್ದು, ಪ್ರಮುಖಪಾತ್ರದಲ್ಲಿ ಶ್ರೀನಿವಾಸಮೂರ್ತಿ, ಸಂಗೀತ, ಹರೀಶ್ ರಾಜ್ ಕಾಣಿಸಿಕೊಳ್ಳಲಿದ್ದಾರೆ. ಸಂಗೀತ ನಿರ್ದೇಶನ ಅದ್ವಿಕ್ ವರ್ಮ ಹಾಗೂ ಸಂಭಾಷಣೆ ಬರೆದು ಸಂಕಲನ ಕಾರ್ಯವನ್ನು ಮಾಡುತ್ತಿರುವುದು ನಾಗೇಶ್.

Leave a Reply

error: Content is protected !!