ಬೈಕ್ನಲ್ಲಿ ಬಂದು ರಸ್ತೆಯಲ್ಲಿ ಹೋಗುತ್ತಿದ್ದ ಒಂಟಿ ಮಹಿಳೆಯರಿಗೆ ಲೈಂಗಿಕ ಕಿರುಕುಳ ನೀಡುತ್ತಿದ್ದ ಆರೋಪಿಯನ್ನು ಮಂಡ್ಯ ಪೂರ್ವ ಠಾಣೆ ಪೊಲೀಸರು ಬಂಧಿಸಿದ್ದಾರೆ.
ಕೆರಗೋಡು ಗ್ರಾಮದ ಚಂದ್ರಶೇಖರ್ ಆರಾಧ್ಯ (35)ಬಂಧಿತ ಆರೋಪಿ. ಚಂದ್ರಶೇಖರ ಹೆಲ್ಮೆಟ್ ಧರಿಸಿ ಬೈಕ್ನಲ್ಲಿ ಬಂದು ರಸ್ತೆಯಲ್ಲಿ ಹೋಗ್ತಿದ್ದ ಒಂಟಿ ಮಹಿಳೆಯರಿಗೆ ಕಿರುಕುಳ ಕೊಡುತ್ತಿದ್ದನು. ಚಂದ್ರಶೇಖರ ಕಳೆದ ಒಂದು ತಿಂಗಳಿಂದ ಹಲವೆಡೆ ವಿಕೃತವಾಗಿ ನಡೆದುಕೊಂಡಿದ್ದನು.
ಬುಧವಾರ (ನ.29)ರ ಸಂಜೆ ರಸ್ತೆಯಲ್ಲಿ ಒಂಟಿಯಾಗಿ ಹೋಗುತ್ತಿದ್ದ ಮಹಿಳೆಗೆ ಲೈಂಗಿಕ ಕಿರುಕುಳ ನೀಡಿ ಪರಾರಿಯಾಗಿದ್ದಾನೆ. ಈ ವೇಳೆ ಆರೋಪಿಯ ಬಗ್ಗೆ ಸ್ಥಳೀಯರು ಪೊಲೀಸರಿಗೆ ಮಾಹಿತಿ ನೀಡಿದ್ದಾರೆ. ಸಾರ್ವಜನಿಕರಿಂದ ಮಾಹಿತಿ ಪಡೆದ ಪೊಲೀಸರು ಸಿಸಿಕ್ಯಾಮರಾ ದೃಶ್ಯಾವಳಿ ಆಧರಿಸಿ ಚಂದ್ರಶೇಖರ್ನನ್ನು ಬಂಧಿಸಿದ್ದಾರೆ. ಮಂಡ್ಯ ಪೂರ್ವ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ.