ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಒಂದೂವರೆ ವರ್ಷದ ಪುಟ್ಟ ಕಂದಮ್ಮ ದುರ್ಮರಣಕ್ಕೀಡಾದ ಘಟನೆ ಕೇರಳದಲ್ಲಿ ನಡೆದಿದೆ.
ಮೃತ ಬಾಲಕನನ್ನು ವೈಷ್ಣವ್ ಎಂದು ಗುರುತಿಸಲಾಗಿದೆ. ಮೃತ ವೈಷ್ಣವ್, ಮಂಕಂಕುಜಿ ಮಲಯಿಲ್ ಪಾಡೆತತ್ತಿಲ್ ಹೌಸ್‍ನ ವಿಜೀಶ್ ಮತ್ತು ದಿವ್ಯಾ ದಾಸ್ ಅವರ ಅವಳಿ ಮಕ್ಕಳಲ್ಲಿ ಒಬ್ಬರು.
ಈ ಘಟನೆ ಇಂದು ಬೆಳಗ್ಗೆ 9.30ರ ಸುಮಾರಿಗೆ ನಡೆದಿದೆ. ಘಟನೆ ಸಂದರ್ಭದಲ್ಲಿ ಮಗು ಹಾಗೂ ಆತನ ತಾಯಿ ದಿವ್ಯಾ ಮಾತ್ರ ಮನೆಯಲ್ಲಿದ್ದರು. ಮಗುವಿನ ತಂದೆ ವೃತ್ತಿಯಲ್ಲಿ ಕಾರ್ಪೆಂಟರ್ ಆಗಿದ್ದು, ಪಾಲಕ್ಕಾಡ್‍ನಲ್ಲಿರುವ ತಮ್ಮ ಸಂಬಂಧಿಕರ ಮನೆಗೆ ಕೆಲಸಕ್ಕೆ ತೆರಳಿದ್ದರು. ಇದನ್ನೂ ಓದಿ: ದುಬಾರಿ ನಾಯಿಯನ್ನು ಕೊಡಿಸಲಿಲ್ಲವೆಂದು ಯುವಕ ಆತ್ಮಹತ್ಯೆ
ಬಾಲಕ ಚಕ್ಕುಲಿಯನು ತಿಂದುಕೊಂಡು ತನ್ನ ಪಾಡಿಗೆ ಆಟವಾಡುತ್ತಿದ್ದನು. ಈ ವೇಳೆ ಏಕಾಏಕಿ ಚಕ್ಕುಲಿಯನ್ನು ನುಂಗಿಬಿಟ್ಟಿದ್ದಾನೆ. ಪರಿಣಾಮ ಚಕ್ಕುಲಿ ಗಂಟಲಲ್ಲಿ ಸಿಲುಕಿಕೊಂಡು ಆತನಿಗೆ ಉಸಿರಾಡಲು ಸಾಧ್ಯವಾಗುತ್ತಿರಲಿಲ್ಲ. ಕೂಡಲೇ ಆತನನ್ನು ಕೊಲ್ಲಂನಲ್ಲಿರುವ ಖಾಸಗಿ ಆಸ್ಪತ್ರೆಗೆ ಕರೆದುಕೊಂಡು ಹೋಗಲಾಯಿತು. ಆದರೆ ವೈಷ್ಣವ್‍ನನ್ನು ಉಳಿಸಿಕೊಳ್ಳಲು ಸಾಧ್ಯವಾಗಿಲ್ಲ.
ಅವಳಿ ಸಹೋದರಿ ವೈಗಾ ಹಾಗೂ ತಂದೆ, ತಾಯಿಯನ್ನು ವೈಷ್ಣವ್ ಅಗಲಿದ್ದಾನೆ.