ಕಡಬ ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ

ಶೇರ್ ಮಾಡಿ

ಕಡಬ ಸೈಂಟ್ ಜೋಕಿಮ್ ವಿದ್ಯಾ ಸಂಸ್ಥೆಗಳ ವಾರ್ಷಿಕ ಕ್ರೀಡಾಕೂಟ ನೆರವೇರಿತು. ಮುಖ್ಯ ಅತಿಥಿಗಳಾಗಿ ಕ್ರೀಡಾಕೂಟವನ್ನು ಉದ್ಘಾಟಿಸಿದ ಕಡಬ ಆರಕ್ಷಕ ಠಾಣಾ ಉಪ ಠಾಣಾಧಿಕಾರಿ ಚಂದ್ರಶೇಖರ್ ಕ್ರೀಡಾಕೂಟಕ್ಕೆ ಶುಭ ಹಾರೈಸಿ, ಶಿಕ್ಷಣ ಸಂಸ್ಥೆಗಳಲ್ಲಿ ವಿದ್ಯಾರ್ಥಿಗಳಿಗೆ ಪಠ್ಯದ ಜೊತೆಗೆ ಕ್ರೀಡಾ ಚಟುವಟಿಕೆಗಳಿಗೆ ಪ್ರೋತ್ಸಾಹ ದೊರಕಿದಾಗ ರಾಷ್ಟ್ರ ಹಾಗೂ ಅಂತರಾಷ್ಟ್ರೀಯ ಮಟ್ಟದಲ್ಲಿ ಅವರ ಪ್ರತಿಭೆ ಬೆಳಗಲು ಸಾಧ್ಯ, ಕ್ರೀಡಾಕೂಟಗಳು ಹಾಗೂ ಕ್ರೀಡಾ ಚಟುವಟಿಕೆಗಳು ವಿದ್ಯಾರ್ಥಿಗಳ ಬೆಳವಣಿಗೆಗೆ ಪೂರಕ ಎಂದು ಅವರು ಹೇಳಿದರು.

ಕ್ರೀಡಾಕೂಟ ಉದ್ಘಾಟನಾ ಕಾರ್ಯಕ್ರಮದ ಸಭಾಧ್ಯಕ್ಷತೆಯನ್ನು ವಹಿಸಿದ್ದ ಸೈಂಟ್ ಜೋಕಿಮ್ ವಿದ್ಯಾಸಂಸ್ಥೆಗಳ ಸಂಚಾಲಕರಾದ ವಂ. ಪ್ರಕಾಶ್ ಪಾವ್ಲ್ ಡಿಸೋಜ ಅವರು ಧ್ವಜಾರೋಹಣವನ್ನು ನೆರವೇರಿಸಿ ಕ್ರೀಡಾಕೂಟಕ್ಕೆ ಶುಭ ಹಾರೈಸಿದರು.

ವೇದಿಕೆಯಲ್ಲಿ ಸೈಂಟ್ ಅನ್ಸ್ ಆಂಗ್ಲ ಮಾಧ್ಯಮ ಶಾಲೆಯ ಪ್ರಾಂಶುಪಾಲರಾದ ವಂ.ಅಮಿತ್ ಪ್ರಕಾಶ್ ರೋಡ್ರಿಗಸ್, ಸೈಂಟ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಉಪಾಧ್ಯಕ್ಷರಾದ ಡೆನ್ನಿಸ್ ಫೆರ್ನಾಂಡಿಸ್, ಸೈಂಟ್ ಜೋಕಿಮ್ ಚರ್ಚ್ ಪಾಲನಾ ಮಂಡಳಿಯ ಕಾರ್ಯದರ್ಶಿ ಶ್ರೀಮತಿ ಜೆಸಿಂತಾ ವೇಗಸ್, ರಕ್ಷಕ ಶಿಕ್ಷಕ ಸಂಘದ ಉಪಾಧ್ಯಕ್ಷರುಗಳಾದ ಸತೀಶ್ ನಾಯಕ್, ಬಾಲಕೃಷ್ಣ.ಬಿ, ಹರಿಪ್ರಸಾದ್ ಗೌಡ, ಸೈಂಟ್ ಅನ್ಸ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ದಕ್ಷಾ ಪ್ರಸಾದ್, ಸೈಂಟ್ ಜೋಕಿಮ್ ಕಾಲೇಜು ಪ್ರಾಂಶುಪಾಲರಾದ ಕಿರಣ್ ಕುಮಾರ್, ಸೈಂಟ್ ಜೋಕಿಮ್ ಪ್ರಾಥಮಿಕ ಶಾಲಾ ಮುಖ್ಯೋಪಾಧ್ಯಾಯನಿ ಸಿಸ್ಟರ್ ಹಿಲ್ಡಾ ರೋಡ್ರಿಗಸ್ ಉಪಸ್ಥಿತರಿದ್ದರು.

ವಿದ್ಯಾರ್ಥಿ ನಾಯಕಿ ಹರ್ಷಿಣಿ ಪ್ರತಿಜ್ಞಾವಿಧಿಯನ್ನು ಬೋಧಿಸಿದರು. ಸೈಂಟ್ ಜೋಕಿಮ್ ಪ್ರೌಢಶಾಲಾ ಮುಖ್ಯೋಪಾಧ್ಯಾಯನಿ ಶ್ರೀಮತಿ ಪೂರ್ಣಿಮಾ ಸ್ವಾಗತಿಸಿ, ಸೈಂಟ್ ಜೋಕಿಮ್ ಪ್ರಾಥಮಿಕ ಶಾಲಾ ಶಿಕ್ಷಕಿ ಶ್ರೀಮತಿ ಜಲಜಾಕ್ಷಿ ವಂದಿಸಿದರು. ಸೈಂಟ್ ಜೋಕಿಮ್ ಕಾಲೇಜು ಉಪನ್ಯಾಸಕಿ ಶ್ರೀಮತಿ ಸುಜಾ ವಿ.ಜೆ ಕಾರ್ಯಕ್ರಮವನ್ನು ನಿರೂಪಿಸಿದರು.

Leave a Reply

error: Content is protected !!