ಸೋಮೇಶ್ವರ ಬಳಿ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲು

ಶೇರ್ ಮಾಡಿ

ಸಮುದ್ರತೀರದಲ್ಲಿ ಆಟವಾಡುವ ಸಂದರ್ಭ ಅಪ್ಪಳಿಸಿದ ಅಲೆಗಳ ನಡುವೆ ಸಿಲುಕಿದ ಇಬ್ಬರು ವಿದ್ಯಾರ್ಥಿಗಳು ಸಮುದ್ರಪಾಲಾದ ಘಟನೆ ದಕ್ಷಿಣ ಕನ್ನಡ ಜಿಲ್ಲೆಯ ಉಳ್ಳಾಲ ತಾಲೂಕಿನ ಸೋಮೇಶ್ವರದಲ್ಲಿ ನಡೆದಿದೆ.

ಸೋಮೇಶ್ವರ ಪರಿಜ್ಞಾನ ದ್ವಿತೀಯ ಪಿಯುಸಿ ಕಾಲೇಜಿನ ಯಶ್ವಿತ್​ ಹಾಗೂ ಯುವರಾಜ್ ಮೃತ ವಿದ್ಯಾರ್ಥಿಗಳು. ಇನ್ನು ಇವರ ಮೃತ ದೇಹಕ್ಕಾಗಿ ಸ್ಥಳೀಯ ಈಜುಗಾರರು, ಉಳ್ಳಾಲ ಪೊಲೀಸ್ ಠಾಣಾ ಸಿಬ್ಬಂದಿಯಿಂದ ಕಾರ್ಯಾಚರಣೆ ನಡೆದಿದೆ.

ಇನ್ನು ಘಟನೆ ಹಿನ್ನಲೆ ಸೋಮೇಶ್ವರ ಸಮುದ್ರ ತೀರದಲ್ಲಿ ಮುಂಜಾಗ್ರತಾ ಕ್ರಮವಾಗಿ ಈಜಲು ತೆರಳದಂತೆ ಉಳ್ಳಾಲ ಠಾಣಾಧಿಕಾರಿ ಹೆಚ್. ಎನ್ ಬಾಲಕೃಷ್ಣ ಸೂಚಿಸಿದ್ದಾರೆ. ಈ ಕುರಿತು ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಪ್ರಕರಣ ದಾಖಲಾಗಿದೆ.

Leave a Reply

error: Content is protected !!