ಟ್ರಕ್ ಡಿಕ್ಕಿ; ಬುಡ ಸಮೇತ ಕಿತ್ತು ಬಿದ್ದ ಟೋಲ್ ಗೇಟ್ ನ ಕಂಬ

ಶೇರ್ ಮಾಡಿ

ಶನಿವಾರ ರಾತ್ರಿ ಮಳೆಗೆ ಸುರತ್ಕಲ್ ನಲ್ಲಿರುವ ನಿರುಪಯುಕ್ತ ಎನ್ ಐ ಟಿ ಕೆ ಟೋಲ್ ಗೇಟ್ ಗೆ ಟ್ರಕ್ ವೊಂದು ಡಿಕ್ಕಿ ಹೊಡೆದ ಘಟನೆ ಶನಿವಾರ ಮಧ್ಯರಾತ್ರಿ 2.30ರ ಸುಮಾರಿಗೆ ನಡೆದಿರುವ ಬಗ್ಗೆ ವರದಿಯಾಗಿದೆ.

ಮಂಗಳೂರು ಕಡೆಯಿಂದ ಉಡುಪಿಯತ್ತ ಸಂಚರಿಸುತ್ತಿದ್ದ ಟ್ರಕ್ ವೊಂದು ಢಿಕ್ಕಿ ಹೊಡೆದ ಪರಿಣಾಮ ಟೋಲ್ ಗೇಟ್ ನ ಕಂಬವೊಂದು ಬುಡ ಸಮೇತ ಕಿತ್ತು ಬಂದಿದ್ದು, ಘಟನೆಯಿಂದ ಲಾರಿ ಚಾಲಕನಿಗೆ ಸಣ್ಣಪುಟ್ಟ ಗಾಯಗಳಾಗಿವೆ ಎಂದು ತಿಳಿದು ಬಂದಿದೆ.

ಅಪಘಾತದ ಪರಿಣಾಮ ಕಂಬಗಳು ಜಾರಿ ಕುಸಿಯುವ ಭೀತಿ ಮೂಡಿಸಿದೆ. ಅಪಘಾತದಿಂದ ಹಲವಾರು ವಾಹನಗಳು ಹಾನಿಗೀಡಾಗುತ್ತಿದ್ದು, ಹೆದ್ದಾರಿ ಇಲಾಖೆ ಇದಕ್ಕೆಲ್ಲ ಕಾರಣವಾಗುತ್ತಿದೆ ಎಂಬುದು ವಾಹನ ಸವಾರರ ಆರೋಪ. ತಕ್ಷಣ ಈ ಟೋಲ್ ಬೂತ್ ತೆರವಿಗೆ ಒತ್ತಾಯಿಸಲಾಗುತ್ತಿದೆ.

ಟೋಲ್ ಸಂಗ್ರಹ ನಿಂತ ಬಳಿಕ ಅಲ್ಲಿನ ವಿದ್ಯುತ್ ಸಂಪರ್ಕ ಕಡಿತಗೊಳಿಸಲಾಗಿದ್ದು, ಕತ್ತಲಲ್ಲಿ ದಿಢೀರ್ ಎದುರಾಗುವ ಟೋಲ್ ಕಂಬಗಳು ಅಪಘಾತದ ಸ್ಪಾಟ್ ಆಗಿ ಬದಲಾಗಿದೆ.

ಘಟನಾ ಸ್ಥಳಕ್ಕೆ ಮಂಗಳೂರು ಉತ್ತರ ಸಂಚಾರ ಪೊಲೀಸರು ಭೇಟಿ ನೀಡಿ ಪರಿಶೀಲನೆ ನಡೆಸಿದ್ದು, ಮುಂದಿನ ಕ್ರಮ ಕೈಗೊಂಡಿದ್ದಾರೆ.

Leave a Reply

error: Content is protected !!