ಒಂದೇ ಕೋಮಿನ ಜೋಡಿಯನ್ನು ತಡೆದು ಹಲ್ಲೆಗೆ ಯತ್ನ!

ಶೇರ್ ಮಾಡಿ

ದಕ್ಷಿಣ ಕನ್ನಡ ಜಿಲ್ಲೆಯಲ್ಲಿ ಮತ್ತೆ ನೈತಿಕ ಪೊಲೀಸ್ ಗಿರಿ ನಡೆದಿದ್ದು, ಮುಸ್ಲಿಂ ಜೋಡಿಯೊಂದಕ್ಕೆ ಮುಸ್ಲಿಂ ಯುವಕರ ತಂಡವೇ ಹಲ್ಲೆ ನಡೆಸಿದ ಪ್ರಸಂಗ ನಡೆದಿದೆ.

ಉಪ್ಪಿನಂಗಡಿ ಸಮೀಪದ ಬಾಜಾರು ಎಂಬಲ್ಲಿ ಮುಸ್ಲಿಂ ಜೋಡಿ ಇರೋದನ್ನು ಪ್ರಶ್ನಿಸಿದ ಮುಸ್ಲಿಂ ಯುವಕರ ತಂಡ ಅವಾಚ್ಯ ಶಬ್ದಗಳಿಂದ ನಿಂದಿಸಿ. ಬಳಿಕ ಯುವಕನ ಮೇಲೆ ಹಲ್ಲೆ ನಡೆಸಿದೆ. ಈ ಘಟನೆ ವಾರದ ಹಿಂದೆ ನಡೆದಿದ್ದು, ಇದೀಗ ಹಲ್ಲೆಯ ವೀಡಿಯೋ ವೈರಲ್ ಆಗಿದೆ.

ಈ ಬಗ್ಗೆ ಯುವತಿಯ ತಾಯಿ ಉಪ್ಪಿನಂಗಡಿ ಪೊಲೀಸ್ ಠಾಣೆಯಲ್ಲಿ ದೂರು ನೀಡಿದ್ದಾರೆ. ಇದೀಗ ಪೋಕ್ಸೋ (POCSO) ಪ್ರಕರಣ ದಾಖಲಾಗಿದೆ. ಹಲ್ಲೆ ನಡೆಸಿದ್ದ ಆರೋಪಿಗಳು ಪರಾರಿಯಾಗಿದ್ದು, ಪೊಲೀಸರು ಆರೋಪಿಗಳ ಪತ್ತೆಗೆ ಬಲೆ ಬೀಸಿದ್ದಾರೆ.

Leave a Reply

error: Content is protected !!