ಬಸ್ – ಬೊಲೆರೊ ಢಿಕ್ಕಿ; ಓರ್ವ ಸ್ಥಳದಲ್ಲೇ ಮೃತ್ಯು, ಇಬ್ಬರಿಗೆ ಗಂಭೀರ ಗಾಯ

ಶೇರ್ ಮಾಡಿ

ಬಸ್-ಬೊಲೆರೊ ಮುಖಾಮುಖಿ ಢಿಕ್ಕಿ ಹೊಡೆದ ಪರಿಣಾಮ ಓರ್ವ ಸ್ಥಳದಲ್ಲೇ ಮೃತಪಟ್ಟು ಇಬ್ಬರು ಗಂಭೀರವಾಗಿ ಗಾಯಗೊಂಡ ಘಟನೆ ನಿಟ್ಟೆ ಗ್ರಾಮದ ಮಂಜರ್ಪಲ್ಕೆ ಎಂಬಲ್ಲಿ ನಡೆದಿದೆ.

ನಂದಳಿಕೆ ಕಡೆಯಿಂದ ಬರುತ್ತಿದ್ದ ಬೊಲೆರೊ ಕಾರ್ಕಳ ಕಡೆಯಿಂದ ಬರುತ್ತಿದ್ದ ಮುಂಬೈ ಬಸ್‌ ಢಿಕ್ಕಿ ಹೊಡೆದ ಪರಿಣಾಮ ಈ ಘಟನೆ ಸಂಭವಿಸಿದೆ.ಚಿಕ್ಕಮಗಳೂರು ಜಿಲ್ಲೆಯ ಜಯಪುರ ನಿವಾಸಿ ಶಿವಪ್ಪ (48) ಸ್ಥಳದಲ್ಲೇ ಮೃತಪಟ್ಟರೆ, ಮಂಜು (45), ಸುಜಯ (28) ಎಂಬವರ ಸ್ಥಿತಿ ಗಂಭೀರವಾಗಿದ್ದು ಅವರನ್ನು ಮಣಿಪಾಲದ ಆಸ್ಪತ್ರೆಗೆ ದಾಖಲಿಸಲಾಗಿದೆ.

ಕಾರ್ಕಳ ತಾಲೂಕಿನ ನಂದಳಿಕೆಯ ತಮ್ಮ ಕುಟುಂಬದ ಮನೆಗೆ ಕಾರ್ಯಕ್ರಮಕ್ಕಾಗಿ ಚಿಕ್ಕಮಗಳೂರು ಜಿಲ್ಲೆಯ ಜಯಪುರದಿಂದ ನಂದಳಿಕೆಗೆ ಬೆಳಗ್ಗೆ ಬಂದಿದ್ದ ಕುಟುಂಬದ ಸದಸ್ಯರು ಮನೆಯಲ್ಲಿ ಪೂಜೆ ಮುಗಿಸಿ ಮಧ್ಯಾಹ್ನ ಹಿಂದಿರುವ ಸಂಧರ್ಭದಲ್ಲಿ ಈ ಘಟನೆ ಸಂಭವಿಸಿದೆ.

ಅಪಘಾತದಲ್ಲಿ ಮೃತರಾದ ಕುಟುಂಬ ಗುರಿಕಾರ ಶಿವಪ್ಪನವರೇ ಮುಂದೆ ನಿಂತು ದೈವದ ಕೆಲಸದ ವಿಧಿವಿಧಾನಗಳನ್ನು ನಡೆಸಿಕೊಟ್ಟಿದ್ದರು ಎಂದು‌ ತಿಳಿದು ಬಂದಿದೆ. ಬಸ್ಸಿನಲ್ಲಿದ್ದ 12 ಮಂದಿ ಪ್ರಯಾಣಿಕರನ್ನು ಹೆಚ್ಚಿನ ಚಿಕಿತ್ಸೆಗಾಗಿ ಕಾರ್ಕಳದ ಆಸ್ಪತ್ರೆಗೆ ಕರೆದೊಯ್ಯಲಾಗಿದೆ.

ಪೊಲೀಸರು ಘಟನಾ ಸ್ಥಳಕ್ಕೆ ಆಗಮಿಸಿ, ಪರಿಶೀಲನೆ ನಡೆಸಿದ್ದಾರೆ.

Leave a Reply

error: Content is protected !!