3 ವರ್ಷದ ಮಗುವಿನ ಮೇಲೆ 55 ವರ್ಷದ ವ್ಯಕ್ತಿಯಿಂದ ಅತ್ಯಾಚಾರಕ್ಕೆ ಯತ್ನ: ಬಂಧನ!

ಶೇರ್ ಮಾಡಿ

ಕೆಆರ್‌ಎಸ್ ಪೊಲೀಸ್ ಠಾಣಾ ವ್ಯಾಪ್ತಿಯಲ್ಲಿ ಮೂರು ವರ್ಷದ ಮಗುವಿನ ಮೇಲೆ ವ್ಯಕ್ತಿಯೊಬ್ಬ ಅತ್ಯಾಚಾರಕ್ಕೆ ಯತ್ನಿಸಿರುವ ಘಟನೆ ನಡೆದಿದೆ. ಮಗುವಿನ ತಾಯಿ ನೀಡಿದ ದೂರನು ಆಧರಿಸಿ ಆರೋಪಿಯನ್ನು ಪೊಲೀಸರು ಬಂಧಿಸಿದ್ದಾರೆ. ಶಿವಣ್ಣ (55) ಬಂಧಿತ ವ್ಯಕ್ತಿ. ಮನೆಯ ಬಳಿ ಆಟವಾಡುತ್ತಿದ್ದ ಮಗುವನ್ನು ಪುಸಲಾಯಿಸಿ ತನ್ನ ಮನೆಗೆ ಕರೆದೊಯ್ದ ಆರೋಪಿ ಮಗುವಿನ ಮೇಲೆ ಅತ್ಯಾಚಾರಕ್ಕೆ ಯತ್ನಿಸಿದ್ದಾನೆ.

ಆಟವಾಡುತ್ತಿದ್ದ ಮಗು, ಮನೆ ಹಾಗೂ ಸುತ್ತಮುತ್ತಲು ಕಾಣದಿದ್ದಾಗ ತಾಯಿ ಮತ್ತು ಅಕ್ಕಪಕ್ಕದ ಮನೆಯವರು ಹುಡಕಾಡಿದ್ದಾರೆ. ಈ ವೇಳೆ ಮನೆಯೊಂದರಿಂದ ಮಗು ಚೀರಿದ ಶಬ್ಭದ ಕೇಳಿ ಬಂದಿದೆ. ಆರೋಪಿ ಬಾಗಿಲು ಹಾಕಿದ್ದ ಮನೆ ಒಡೆದು ಒಳ ಹೋದಾಗ ಆರೋಪಿ ಮಗುವನ್ನು ಬಿಟ್ಟು ಪರಾರಿಯಾಗಿದ್ದಾನೆ. ತಕ್ಷಣ ಸಾರ್ವಜನಿಕರು ಪೊಲೀಸರಿಗೆ ಮಾಹಿತಿ ನೀಡಿ ಮಗುವನ್ನು ಮೈಸೂರು ಕೆಆರ್‌ಆಸ್ಪತ್ರೆಗೆ ಕರೆತಂದು ಪರೀಕ್ಷೆಗೆ ಒಳಪಡಿಸಿದರು. ಕೆಆರ್‌ಎಸ್ ಠಾಣೆಯ ಪಿಎಸ್‌ಐ ಬಸವರಾಜು ಮತ್ತು ಸಿಬ್ಬಂದಿ ಆರೋಪಿಯನ್ನು ಬಂಧಿಸಿ ಪ್ರಕರಣ ದಾಖಲಿಸಿಕೊಂಡಿದ್ದಾರೆ.

Leave a Reply

error: Content is protected !!