ಓವರ್ ಟೆಕ್ ಮಾಡುವ ಭರದಲ್ಲಿ ಸ್ಕೂಟಿಗೆ ಡಿಕ್ಕಿ ಹೊಡೆದು ಪರಾರಿಯಾದ ಕಾರು

ಶೇರ್ ಮಾಡಿ

ಕಾರನ್ನು ಓವರ್ ಟೆಕ್ ಮಾಡುವ ಭರದಲ್ಲಿದ್ದ ಇನ್ನೊಂದು ಕಾರು ಎದುರಿಗೆ ಹೋಗುತ್ತಿದ್ದ ಸ್ಕೂಟಿ ಸವಾರನಿಗೆ ಡಿಕ್ಕಿ ಹೊಡೆದು ಸ್ಥಳದಿಂದ ಪರಾರಿಯಾಗಿರುವ ಘಟನೆ ಚಿಕ್ಕಮಗಳೂರು ನಗರದ ಬೇಲೂರು ರಸ್ತೆಯಲ್ಲಿ ನಡೆದಿದೆ.

ಎರಡು ದಿನಗಳ ಹಿಂದೆ ನಡೆದಿರುವ ಘಟನೆಯಾಗಿದ್ದು ಅಪಘಾತದಲ್ಲಿ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಕಾರು ಚಾಲಕ ಕಾರು ನಿಲ್ಲಿಸದೆ ಸ್ಥಳದಿಂದ ಪರಾರಿಯಾಗಿದ್ದಾನೆ. ಘಟನೆಯ ದೃಶ್ಯ ಅಲ್ಲಿನ ಸಿಸಿ ಕ್ಯಾಮೆರಾದಲ್ಲಿ ಸೆರೆಯಾಗಿದ್ದು ಇದೀಗ ವೈರಲ್ ಆಗುತ್ತಿದೆ.

ವಿಡಿಯೋದಲ್ಲಿಒಂದು ಕಾರು ನಿಧಾನವಾಗಿ ಚಲಿಸುತ್ತಿದ್ದು ಈ ವೇಳೆ ಹಿಂದಿನಿಂದ ವೇಗವಾಗಿ ಬಂದ ಕಾರು ಎದುರಿನ ಕಾರನ್ನು ಹಿಂದಿಕ್ಕುವ ಭರದಲ್ಲಿ ರಸ್ತೆಯ ಬಲಭಾಗದಲ್ಲಿ ಚಲಿಸುತ್ತಿದ್ದ ಸ್ಕೂಟಿ ಸವಾರನಿಗೆ ಡಿಕ್ಕಿ ಹೊಡೆದು ಮುಂದೆ ಹೋಗಿದೆ, ಡಿಕ್ಕಿಯ ರಭಸಕ್ಕೆ ಸ್ಕೂಟಿ ಸವಾರ ಡಿವೈಡರ್ ಗೆ ಬಡಿದು ರಸ್ತೆ ಮೇಲೆ ಬೀಳುವುದು ಕಾಣಬಹುದು, ಘಟನೆಯಿಂದ ಸ್ಕೂಟಿ ಸವಾರನಿಗೆ ಗಾಯಗಳಾಗಿದ್ದು ಸ್ಕೂಟಿ ಸಂಪೂರ್ಣ ಪುಡಿ ಪುಡಿಯಾಗಿದೆ.

ಚಿಕ್ಕಮಗಳೂರು ನಗರ ಪೊಲೀಸ್ ‌ಠಾಣಾ ವ್ಯಾಪ್ತಿಯಲ್ಲಿ ಘಟನೆ ನಡೆದಿದೆ.

Leave a Reply

error: Content is protected !!